Saturday, December 6, 2025
Saturday, December 6, 2025

DC Shivamogga ಪರಿಶಿಷ್ಠ ಜಾತಿ/ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣ, ಚಾರ್ಜ್ ಶೀಟ್ ಬಗ್ಗೆ ಕ್ರಮಕೈಗೊಳ್ಳಿ – ಗುರುದತ್ತ ಹೆಗಡೆ

Date:

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳು ದಾಖಲಾದ 60 ದಿನಗಳೊಳಗಾಗಿ ಚಾರ್ಜ್‌ಶೀಟ್‌ಸಲ್ಲಿಕೆಯಾಗದಿರುವ ಪ್ರಕರಣಗಳನ್ನು ಗುರುತಿಸಿ, ಸಭೆಗೆ ಮಂಡಿಸುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ (ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಗಳ ಸಂತ್ರಸ್ಥರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಬೇಕಾದ ಪರಿಹಾರಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳ ಕುರಿತು ಪ್ರತಿ ಮಾಹೆಯ ಸಭೆಯಲ್ಲಿ ಚರ್ಚಿಸುವ ಅಗತ್ಯವಿದೆ. ಜಿಲ್ಲೆಯಾದ್ಯಂತ ಕಂಡುಬರುವ ಬಾಲ್ಯವಿವಾಹ ಪ್ರಕರಣಗಳ ನಿಯಂತ್ರಣಕ್ಕಾಗಿ ಇಲಾಖೆಗಳಿಂದ ಅನೇಕ ಜನಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಉಸ್ತುವಾರಿ ಹಾಗೂ ಬಾಲ್ಯವಿವಾಹಗಳ ನಿಯಂತ್ರಿಸುವಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದ ಅವರು, ಗುರುತಿಸಲಾಗುತ್ತಿರುವ ಬಾಲಗರ್ಭಿಣಿಯರಲ್ಲಿಯೂ ಪರಿಶಿಷ್ಟ ಜಾತಿ ಜನಾಂಗದವರೆ ಹೆಚ್ಚಾಗಿರುವುದು ಅತ್ಯಂತ ನೋವಿನ ಸಂಗತಿ. ಈ ವಿಷಯದಲ್ಲಿ ಸಂಬಂಧಿಸಿದ ಸಮುದಾಯದ ಮುಖಂಡರು ವಿಶೇಷ ಗಮನಹರಿಸುವಂತೆ ಸೂಚಿಸಿದರು.

ಜಿಲ್ಲೆಯ ಪೊಲೀಸ್‌ಠಾಣೆಗಳಲ್ಲಿ ದಾಖಲಾಗುವ ದೌರ್ಜನ್ಯ ಪ್ರಕರಣಗಳನ್ನು ಅವಧಿಪೂರ್ಣಗೊಳ್ಳುವ ಮುನ್ನವೇ ನಿಯಮಾನುಸಾರ ವಿಚಾರಣೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು.‌ಜಾತಿನಿಂದನೆಗೆ ಸಂಬಂಧಿಸಿದಂತೆ ದಾಖಲಾಗುವ ಪ್ರಕರಣಗಳಲ್ಲಿ ಅಗತ್ಯ ಸಾಕ್ಷ್ಯಾಧಾರಗಳೊಂದಿಗೆ ರುಜುವಾತಾಗುವ ಪ್ರಕರಣಗಳು ಶೇ.3ರಷ್ಟು ಮಾತ್ರ. ದೂರುದಾರರ ಹೇಳಿಕೆಗಳು, ಸಮರ್ಥನೀಯವಲ್ಲದ ಮತ್ತಿತರ ಕಾರಣಗಳಿಂದಾಗಿ ಪ್ರಕರಣಗಳು ಮುಕ್ತಾಯಗೊಳ್ಳುತ್ತವೆ. – ಜಿ.ಕೆ.ಮಿಥುನ್‌ಕುಮಾರ್‌, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಗಳು.

DC Shivamogga ಜಿಲ್ಲೆಯ ನ್ಯಾಯಾಲಯದಲ್ಲಿ ದಾಖಲಾಗಿರುವ ಪರಿಶಿಷ್ಟರ ಮೇಲಿನ ಒಟ್ಟು ದೌರ್ಜನ್ಯಗಳ ಪೈಕಿ ಸುಮಾರು 158ಪ್ರಕರಣಗಳು ವಿಚಾರಣೆ ಹಂತದಲ್ಲಿವೆ. ಉಳಿದ ಪ್ರಕರಣಗಳ ಸ್ಥಿತಿಗತಿಗಳ ಕುರಿತು ಮುಂದಿನ ಸಭೆಯಲ್ಲಿ ವಿವರಗಳನ್ನು ಮಂಡಿಸಲಾಗುವುದು. ಜಾತಿನಿಂದನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಆಸಕ್ತರು ಮೊಕದ್ದಮೆಯ ವಿವರಗಳನ್ನು ಮೊಬೈಲ್‌ಆಪ್‌ಮೂಲಕ ವೀಕ್ಷಿಸಬಹುದಾಗಿದೆ. -ಶ್ರೀಮತಿ ಪುಷ್ಪಾ, ಪಬ್ಲಿಕ್‌ಪ್ರಾಸಿಕ್ಯೂಟರ್. ಸಭೆಯಲ್ಲಿ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌, ಪಬ್ಲಿಕ್‌ಪ್ರಾಸಿಕ್ಯೂಟರ್‌ಶ್ರೀಮತಿ ಪುಷ್ಪಾ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮಲ್ಲೇಶಪ್ಪ, ಜಾಗೃತಿ ಸಮಿತಿ ಸದಸ್ಯರಾದ ಶಿವಬಸಪ್ಪ, ರುದ್ರಪ್ಪ ಹೆಚ್‌, ಬಸವರಾಜು ಡಿ ಬೂದಿಗೆರೆ, ಎಂ.ಮಂಜುನಾಥ್‌, ಎಂ.ಅಣ್ಣಪ್ಪ, ನಾಗರಾಜ, ಓಂಪ್ರಕಾಶ್‌ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಜಾಗೃತಿ ಸಮಿತಿಗೆ ಆಯ್ಕೆಯಾಗಿರುವ ನೂತನ ಪದಾಧಿಕಾರಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ಗುರುತಿನ ಚೀಟಿಯನ್ನು ವಿತರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...