ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಡೆಯಲು ಹಾಗೂ ಮಹಿಳೆಯರ ರಕ್ಷಣೆಗಾಗಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ, ಮಹಿಳೆಯರಿಗೆ ಕಿರುಕುಳ ನೀಡುವುದು, ಜಾಲತಾಣಗಳಲ್ಲಿ ವೀಡಿಯೋ ಶೇರ್ ಮಾಡುವುದು, ಮಹಿಳೆಯರ ಮಾನಹಾನಿ ಮಾಡುವುದು, ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುವಂತಹ ಕೃತ್ಯಗಳು ನಡೆದಲ್ಲಿ ಅಥವಾ ಅಂತಹ ವಿಡಿಯೊಗಳು ಅಥವಾ ಖಾತೆಗಳನ್ನು ಆನ್‌ಲೈನ್‌ನಲ್ಲಿ ನೋಡಿದರೆ ತಕ್ಷಣವೇ ಸೈಬರ್ ಸೆಲ್‌ನ ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
