Shimoga Central Jail ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಶಿವಮೊಗ್ಗದ ಸೋಗಾನೆ ಬಳಿಯ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ದೌಲತ್ ಖಾನ್ ಎಂಬ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಈತ ಜೈಲಿನ ಆಸ್ಪತ್ರೆಗೆ ತಾನು ಕಲ್ಲು ನುಂಗಿದ್ದೇನೆ ಎಂದು ಹೇಳಿಕೊಂಡು ಹೋಗಿದ್ದ. ಆದರೆ ವೈದ್ಯರು ಎಕ್ಸರೇ ಮತ್ತು ಸ್ಕ್ಯಾನ್ ಮಾಡಿದಾಗ, ಆತನ ಹೊಟ್ಟೆಯಲ್ಲಿ ಮೊಬೈಲ್ ಇರುವುದು ಪತ್ತೆಯಾಯಿತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್ ಹೊರತೆಗೆದಿದ್ದಾರೆ. ದೌಲತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆ ಜೈಲಿನ ಭದ್ರತಾ ಲೋಪದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
Shimoga Central Jail ಖೈದಿಗಳು ಮೊಬೈಲ್ ಹೇಗೆ ಪಡೆದರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಜೈಲಿನ ಅಧೀಕ್ಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ. ಜೈಲಿನಲ್ಲಿ ಮೊಬೈಲ್ ಮಾರಾಟದ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.
Shimoga Central Jail ಕೈದಿಯ ಹೊಟ್ಟೆಯಲ್ಲಿ ಮೊಬೈಲ್ !. ವೈದ್ಯರಿಂದ ಯಶಸ್ವಿ ಆಪರೇಷನ್
Date:
