Bhadravati Social Welfare Department ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ನವೀನ ಹಾಗೂ ನವೀಕರಣ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದಲ್ಲಿ (ಎನ್.ಎಸ್.ಪಿ) https://ssp.postmatric.karnataka.gov.in/ssppre ರಲ್ಲಿ ದಿ:31/10/2025ರೊಳಗಾಗಿ ಅರ್ಜಿ ಸಲ್ಲಿಸುವುದು ಹಾಗೂ ಮೆಟ್ರಿಕ್ ನಂತರದ ನವೀನ ಹಾಗೂ ನವೀಕರಣ ವಿದ್ಯಾರ್ಥಿವೇತನ ಪಡೆಯಲು SSP ರಲ್ಲಿ SAT ID ಮುಖಾಂತರ ಅರ್ಜಿ ಸಲ್ಲಿಸುವಂತೆ ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರು) ತಿಳಿಸಿದ್ದಾರೆ.
Bhadravati Social Welfare Department ಅರ್ಜಿ ಸಲ್ಲಿಸಲು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾಥಿಯ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ ಮತ್ತು ಆಧಾರ್‌ನಲ್ಲಿರುವ ಹೆಸರು ಒಂದೇ ಆಗಿರಬೇಕು. ಪೋಷಕರ ಆಧಾರ್/ಇ.ಐ.ಡಿ. ಮತ್ತು ಆಧಾರ್ / ಇ.ಐ.ಡಿ.ಯಲ್ಲಿ ನಮೂದಿಸಿರುವಂತೆ ಹೆಸರು, ವಿದ್ಯಾರ್ಥಿಯ ಹೆಸರಿನಲ್ಲಿ ನೀಡಲಾದ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ವಿದ್ಯಾರ್ಥಿಯು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕ್ ಖಾತೆ ಹೊಂದಿರಬೇಕು ಹಾಗೂ ಆಧಾರ್ ಸೀಡಿಂಗ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಆಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಭದ್ರಾವತಿ, ಇವರನ್ನು ಸಂಪರ್ಕಿಸುವುದು.
Bhadravati Social Welfare Department ಭದ್ರಾವತಿಯಲ್ಲಿನ ಮೆಟ್ರಿಕ್ ಪೂರ್ವ & ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Date:
