Monday, February 2, 2026
Monday, February 2, 2026

CM Siddaramaiah ಶಿಷ್ಟಾಚಾರ ಪಾಲಿಸಿಲ್ಲ. ಸಚಿವ ನಿತಿನ್ ಗಡ್ಕರಿ ಅವರಿಗೆ ಕಾರ್ಯಕ್ರಮ ಮುಂದೂಡಲು ತಿಳಿಸಿದ್ದೆ -ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ‌

Date:

CM Siddaramaiah ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದ್ದೆ,
ಜೊತೆಗೆ ಪತ್ರವನ್ನೂ ಬರೆಯಲಾಗಿತ್ತು.

ಕೇಂದ್ರ ಸಚಿವರು ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರು, ಆದರೆ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೆಯೆ ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು ಸಿದ್ಧರಸಮಯ್ಯ ತಿಳಿಸಿದ್ದಾರೆ.
ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು
ಸಾಧ್ಯವಾಗುತ್ತಿಲ್ಲ.

ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ.
ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲೀ, ಸಂಬಂಧಪಟ್ಟ ಇಲಾಖಾ ಸಚಿವರಿಗಾಗಲೀ, ಸ್ಥಳೀಯ ಶಾಸಕರಿಗಾಗಲೀ ಸರಿಯಾಗಿ ಆಮಂತ್ರಣ ನೀಡಿಲ್ಲ.

CM Siddaramaiah ಸರ್ಕಾರಗಳ ನಡುವೆ ಹೀಗೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ‌ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...