J.S. Chidananda Gowda ಶರಾವತಿ ಹಿನ್ನೀರಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಆಗ್ರಹಿಸಿದ್ದಾರೆ.
೧೯೬೪ರಲ್ಲಿ ಲಿಂಗನಮುಕ್ಕಿ ಆಣೆಕಟ್ಟೆಯ ಪರಿಣಾಮ ಸಾಗರ ಹೊಸನಗರ ಭಾಗದ ಅನೇಕ ಗ್ರಾಮಗಳ ಸಂಪರ್ಕ ರಸ್ತೆಗಳು ಮುಳುಗಡೆಯಾದವು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ೧೦೦ ಕೋಟಿ ರೂ., ಅನುದಾನವನ್ನು ಸೇತುವೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದರು. ಸೇತುವೆ ನಿರ್ಮಾಣಕ್ಕಾಗಿ ಸುಮಾರು ಏಳು ದಶಕಗಳ ಕಾಲ ದ್ವೀಪದ ಜನರು ಹೋರಾಟ ಮಾಡಿದ್ದರು. ಬಿ.ಎಸ್. ಯಡಿಯೂರಪ್ಪನವರ ಹಠ ಮತ್ತು ಬಿ.ವೈ. ರಾಘವೇಂದ್ರ ಅವರ ಛಲದಿಂದ ಇದೀಗ ಸೇತುವೆ ನಿರ್ಮಾಣವಾಗಿರುವುದು ಸಂತಸದ ವಿಷಯವಾಗಿದೆ ಎಂದಿದ್ದಾರೆ.
J.S. Chidananda Gowda ದ್ವೀಪದ ಜನತೆ ತುರ್ತು ಸ್ಥಿತಿಯಲ್ಲಿ ಸಾಗರಕ್ಕೆ ತಲುಪಲು ಸಾಧ್ಯವಾಗುತ್ತಿರಲಿಲ್ಲ. ವಿದ್ಯಾರ್ಥಿಗಳಿಗೂ ಸಹ ಅನಾನೂಕೂಲವಾಗಿತ್ತು. ಬಿ.ಎಸ್. ಯಡಿಯೂರಪ್ಪನವರ ನಿರಂತರ ಪ್ರಯತ್ನದಿಂದಾಗಿ ಜಿಲ್ಲಾ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿಸಲು ಸಾಧ್ಯವಾಯಿತು. ಈ ನಡುವೆ ಅರಣ್ಯ ಇಲಾಖೆಯ ಕೆಲ ತೊಡಕುಗಳನ್ನು ಸಂಸದ ಬಿ.ವೈ. ರಾಘವೇಂದ್ರ ನಿವಾರಿಸುವಲ್ಲಿ ಯಶಸ್ವಿಯಾದರು. ಇದರಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಬೆಸೆಯುವಲ್ಲಿ ಸೇತುವೆಯ ಪಾತ್ರ ಮಹತ್ವರವಾಗಿದೆ. ವ್ಯಾಪಾರ-ವಹಿವಾಟು ಅಭಿವೃದ್ಧಿಯಾಗುವ ಜೊತೆಗೆ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ಮೂಡಲಿದೆ. ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಹಾಗೂ ಕೊಲ್ಲೂರು ಮೂಕಾಂಬಿಕ ದೇವಿಯ ದರ್ಶನಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗಲಿದೆ. ವಿನೂತನ ವಿನ್ಯಾಸದ ಸೇತುವೆಗೆ ಬಿಎಸ್‌ವೈ ಬ್ರಿಡ್ಜ್ ಎಂದೇ ಘೋಷಿಸುವುದು ಸೂಕ್ತವಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.
ನೂತನವಾಗಿ ನಿರ್ಮಾಣವಾದ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಗಮನ ನೀಡಬೇಕು. ಯಡಿಯೂರಪ್ಪನವರ ಶ್ರಮ ಅಜರಾಮರವಾಗಿಸಲು ಗಮನ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೂ ಸಹ ಮನವಿ ಸಲ್ಲಿಸಲಾಗಿದೆ
