Shivamogga District Tourism Development Forum ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ವೇದಿಕೆ ವತಿಯಿಂದ ಆಯೋಜಿಸಿದ್ದ ಒಂದು ದಿನದ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 12ನೇ ಶತಮಾನದ ಶರಣರು ನಾಡು ನಮ್ಮ ಜಿಲ್ಲೆ ಶಿವಮೊಗ್ಗ, ಅದರಲ್ಲು ಶಿಕಾರಿಪುರ ತಾಲ್ಲೂಕಿನಲ್ಲಿ ಹಲವಾರು ಶರಣರನ್ನು ಕಾಣಬಹುದು. ಜಿಲ್ಲೆಯಲ್ಲಿರುವ ಪ್ರತಿಯೊಬ್ಬರಿಗೂ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಬಗ್ಗೆ ಅರಿತಿರಬೇಕು. ಈ ನಿಟ್ಟಿನಲ್ಲಿ ಪ್ರತಿ ವಾರ ಒಂದು ದಿನದ ಪ್ರವಾದ ಏರ್ಪಡಿಸುತ್ತಿದ್ದೇವೆ. ಅತ್ಯಂತ ಕಡಿಮೆ ದರದಲ್ಲಿ ಪ್ರವಾಸ ಆಯೋಜಿಸಿದ್ದೇವೆ ಎಂದು ತಿಳಿಸಿದರು.
ಬಸ್ ಮಾಲಿಕರ ಸಂಘದ ಅಧ್ಯಕ್ಷ ರಂಗಪ್ಪ ಮಾತನಾಡಿ, ಬಸ್ ಮಾಲಿಕರು ಅತ್ಯಂತ ಕಡಿಮೆ ದರಕ್ಕೆ ಅತ್ಯುತ್ತಮ ಬಸ್ ಸೌಲಭ್ಯ ನೀಡುತ್ತಿದ್ದು, ಪ್ರಯಾಣಿಕರ ಸಂತೋಷವೆ ಪ್ರವಾಸೋದ್ಯಮದ ಉನ್ನತಿಗೆ ಕಾರಣವಾಗುತ್ತದೆ ಎಂಬ ನಂಬಿಕೆ ಇದೆ ಎಂದರು.
ಅಂಜನಾಪುರ, ಶಿಕಾರಿಪುರ, ಬನವಾಸಿ, ಚಂದ್ರಗುತ್ತಿ ಹಾಗೂ ಹಲವಾರು ಐತಿಹಾಸಿಕ ಸ್ಥಳಗಳಿಗೆ ಒಂದು ದಿನದ ಪ್ರವಾಸ ಏರ್ಪಡಿಸಲಾಗಿತ್ತು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಪ್ರವಾಸದಿಂದ ಜೀವನೋತ್ಸಾಹ ವೃದ್ಧಿಸುತ್ತದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ವತಿಯಿಂದ ನಾಲ್ಕನೇ ಪ್ರವಾಸವಾಗಿದೆ. ಸಾರ್ವಜನಿಕರು ಹೆಚ್ಚಿನ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದರು.
Shivamogga District Tourism Development Forum ವಾಗೇಶ್ ಮಾತನಾಡಿ, ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಲು ಯೂತ್ ಹಾಸ್ಟೆಲ್ ಹಾಗೂ ಅಭಿವೃದ್ಧಿ ವೇದಿಕೆಯಿಂದ ನಿರಂತರವಾಗಿ ಪ್ರವಾಸಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು. ಲಕ್ಷ್ಮೀ ರಾಜೇಶ್, ಮಹಾದೇವ ಸ್ವಾಮಿ ಇದ್ದರು. 50ಕ್ಕೂ ಹೆಚ್ಚು ಜನ ಪ್ರವಾಸದಲ್ಲಿ ಪಾಲ್ಗೊಂಡಿದ್ದರು.
