Karnataka Skill Development Corporation ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಯುವ ಕೌಶಲ್ಯ ದಿನಾಚರಣೆ ಹಾಗೂ ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ, ಶುಶೂಷಾ ಪರಿಷತ್ತು (KSNC) ವತಿಯಿಂದ ಆಧಾರ್ ಹಾಗೂ ಡಿಜಿಲಾಕರ್ ಇ-ಕೆವೈಸಿ ಮೂಲಕ ಶುಶೂಷಾ ಸಮೂಹದವರಿಗೆ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನದ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
Karnataka Skill Development Corporation ಈ ಸಂದರ್ಭದಲ್ಲಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
