S.N.Chennabasappa ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 07ರ ದಾಮೋದರ ಬಡಾವಣೆ ಹಾಗೂ ವಾರ್ಡ್ ನಂಬರ್ 34ರ ವಿದ್ಯಾನಗರದ ಮಹಾದೇವಿ ಟಾಕೀಸ್ ಹಿಂಭಾಗದ ಇಸ್ಲಾಪುರ ಬಡಾವಣೆಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ನೇರವಾಗಿ ಆಲಿಸಿದರು.
S.N.Chennabasappa ಈ ಸಂದರ್ಭದಲ್ಲಿ:
1. ಸ್ವಚ್ಛತೆ, ಕುಡಿಯುವ ನೀರು ಮತ್ತು ಬೀದಿ ದೀಪಗಳ ತೊಂದರೆಗಳಿಗೆ ಸಂಬಂಧಿಸಿದಂತೆ ನಿವಾಸಿಗಳಿಂದ ವಿವರವಾದ ಮಾಹಿತಿ ಪಡೆಯಲಾಗಿದ್ದು, ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
2. ವಿದ್ಯಾನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಲಭ್ಯಗಳ ಕೊರತೆ, ಸಿಬ್ಬಂದಿಯ ಲಭ್ಯತೆ ಮತ್ತು ಸೇವಾ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ, ಸೌಲಭ್ಯ ಸುಧಾರಣೆಗಾಗಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
3. ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ, ಬಿಸಿ ಊಟಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
4. ಸವಿತಾ ಸಮಾಜದ ನಿವೇಶನಕ್ಕೆ ಸಂಬಂಧಿಸಿದಂತೆ ಇರುವ ಸಮಸ್ಯೆಗೆ ಸಂಬಂಧಿಸಿದಂತೆ ಸ್ಥಳೀಯರು, ಬಿಜೆಪಿಯ ಪ್ರಮುಖರು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಫಲಪ್ರದ ಚರ್ಚೆಯನ್ನು ನಡೆಸಿದರು.
