Tuesday, May 5, 2026
Tuesday, May 5, 2026

Department of Labor ಕಾರ್ಮಿಕ ಕಲ್ಯಾಣ ಯೋಜನೆಯಡಿ 2025-26 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಪಡೆಯಲು ಅರ್ಹರಿಂದ ಆನ್ ಲೈನ್ ಅರ್ಜಿ ಆಹ್ವಾನ

Date:

Department of Labor ಕಾರ್ಮಿಕ ಇಲಾಖೆಯು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಯಡಿ 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಪ್ರೌಢ ಶಾಲಾಯಿಂದ ಸ್ನಾತಕೋತ್ತರ ಪದವಿಯವರಿಗೆ ಹಾಗೂ ವೈದ್ಯಕೀಯ/ಇಂಜಿಯಿಯರಿಂಗ್ ವ್ಯಾಸಂಗ ಮಾಡುತ್ತಿರುವ ಹಾಗೂ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50 ರಷ್ಟು, ಪ.ಜಾ/ಪ.ಪಂ ಶೇ. 45% ರಷ್ಟು ಅಂಕ ಪಡೆದು ತೇರ್ಗಡೆಯೊಂದಿರುವ ಮತ್ತು ಕಾರ್ಮಿಕನ ಮಾಸಿಕ ವೇತನ ರೂ. 35,000/- ಗಳಿಗಿಂತ ಕಡಿಮೆಯಿರುವ ಜಿಲ್ಲೆಯ ಸಂಘಟಿತ ಕಾರ್ಮಿಕರ ಇಬ್ಬರು ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಮಂಡಳಿಯ ವೆಬ್‌ಸೈಟ್ www.klwbapps.karnataka.gov.in ರಲ್ಲಿ ದಿ: 31/12/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Department of Labor ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ. 48, 1 ಮತ್ತು 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂ.ಸಂ.: 080-23475188/ 8277291175/ 8277120505 ಮೂಲಕ ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...