Sunday, August 2, 2026
Sunday, August 2, 2026

Shivamogga Police ಶಿವಮೊಗ್ಗ ನಗರದ ಉಷಾ ವೃತ್ತದಲ್ಲಿ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಅಳವಡಿಕೆ

Date:

Shivamogga Police ಶಿವಮೊಗ್ಗ ನಗರದ ಉಷಾ ವೃತ್ತದಲ್ಲಿ, ಹೆಚ್ಚಿನ ವಾಹನಗಳು ಸಂಚರಿಸುತ್ತಿದ್ದು ಹಾಗೂ ಸದರಿ ಸ್ಥಳದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸದೇ ಇದ್ದ ಕಾರಣ ವಾಹನ ದಟ್ಟಣೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಲೈಟ್ ಅನ್ನು ಅಳವಡಿಸುತ್ತಿದ್ದು, ಈ ದಿನ ದಿನಾಂಕಃ 16-07-2025 ರಂದು ಶ್ರೀ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಟ್ರಾಫಿಕ್ ಸಿಗ್ನಲ್ ಗೆ ಚಾಲನೆ ನೀಡಿ, ಈ ಕೆಳಕಂಡಂತೆ ಮಾತನಾಡಿರುತ್ತಾರೆ.

1) ಸಂಚಾರ ದಟ್ಟಣೆಯ ನಿಯಂತ್ರಣದ ಸಂಬಂಧ ಉಷಾ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅನ್ನು ಅಳವಡಿಸಲಾಗಿರುತ್ತದೆ.

2) ಈ ಸ್ಥಳದಲ್ಲಿ ಸಿಗ್ನಲ್ ಲೈಟ್ ನ ಅಳವಡಿಕೆಯ ಅವಶ್ಯಕತೆ ತುಂಬಾ ಇದ್ದು, ಸಾರ್ವಜನಿಕರು, ಜನಪ್ರತಿನಿಧಿಗಳು, ಮುಖಂಡರು ಗಳ ಸಹಾ ಸಿಗ್ನಲ್ ಲೈಟ್ ಅಳವಡಿಕೆ ಮಾಡುವಂತೆ ಕೋರಿಕೆ ಸಲ್ಲಿಸಿದ್ದು, ಈ ಸಂಬಂಧ ಟ್ರಾಫಿಕ್ ಲೈಟ್ ಅನ್ನು ಅಳವಡಿಕೆ ಮಾಡಲಾಗಿರುತ್ತದೆ.

3) ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಒಳ್ಳೆಯ ಕೆಲಸವಾಗುತ್ತದೆ ಎಂಬುದಕ್ಕೆ, ಇದೇ ಒಂದು ಉತ್ತಮ ಉದಾಹರಣೆಯಾಗಿರುತ್ತದೆ.

4) ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲನೆ ಮಾಡಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದಾರೆ, ಸಂಚಾರಿ ಟ್ರಾಫಿಕ್ ಸಿಗ್ನಲ್ ಇದೆ ಎಂದು ಮಾತ್ರ ನಿಮ್ಮ ಸುರಕ್ಷತೆಯ ದೃಷ್ಠಿಯಿಂದ ಸಂಚಾರ ನಿಯಮಗಳನ್ನು ಪಾಲನೆ ಮಾಡಿರಿ.

5) ನಿಮ್ಮ ಕುಟುಂಬ, ಸ್ನೇಹಿತರು, ಅವಲಂಬಿತರು ಮತ್ತು ನಿಮ್ಮ ಜೀವದ ಸುರಕ್ಷತೆಯ ಹಿನ್ನೆಲೆಯಲ್ಲಿ ಸಂಚಾರ ನಿಯಮ ಪಾಲನೆ ಅವಶ್ಯಕವಿರುತ್ತದೆ.

6)ಕೇವಲ ಸೀಟ್ ಬೆಲ್ಟ್, ಹೆಲ್ಮೇಟ್ ಧರಿಸುವುದರಿಂದಲೇ ಎಷ್ಟೋ ಬಾರಿ ಮಾರಣಾಂತಿಕ ಅಪಘಾತ ತಡೆದು, ಪ್ರಾಣವನ್ನು ರಕ್ಷಿಸಲು ಸಾಧ್ಯವಿರುತ್ತದೆ.

7) ಅಪಘಾತದಲ್ಲಿ ಹೆಚ್ಚಿನ ಸಂದರ್ಭ ಯುವಕರೇ ಪ್ರಾಣ ಕಳೆದುಕೊಳ್ಳುತ್ತಾರೆ, ಸಾಮಾನ್ಯ ಸಂಚಾರ ನಿಯಮಗಳನ್ನು ಪಾಲನೆ ಮಾಡದೇ ಇದ್ದ ಸಂದರ್ಭದಲ್ಲಿ ಈ ರೀತಿಯ ಸಣ್ಣ ಪುಟ್ಟ ಅಪಘಾತಗಳು ಸಹಾ ಮಾರಣಾಂತಿಕ ಅಪಘಾತಗಳಾಗಿ ಪರಿಣಮಿಸುತ್ತವೆ.

8) ಅಪಘಾತದಲ್ಲಿ ಕೇವಲ ಗಾಯಾಳುವಲ್ಲದೇ ಆತನ ಅವಲಂಬಿತರೂ ಸಹಾ ತೊಂದರೆಗೆ ಒಳಗಾಗುತ್ತಾರೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲನೆ ಮಾಡಿ. Shivamogga Police ದೇವರಾಜ್, ಸಿಪಿಐ ಶಿವಮೊಗ್ಗ ಸಂಚಾರ ವೃತ್ತ, ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ, ನವೀನ್ ಎಂ, ಪಿಎಸ್ಐ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆ ರವರು ಹಾಗೂ ಮುಖಂಡರುಗಳಾದ ಸಂತೋಷ್ ಬೆಳ್ಳಿಕೆರೆ, ಯೋಗೇಶ್, ಉದಯ್ ದಾಸ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...