B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಪರ್ಕ ಕ್ರಾಂತಿಯ ಹೊಸ ಅಧ್ಯಾಯ ಆರಂಭ ಎಂದು ಹೆಮ್ಮೆ ಪಡುವ ಸಂಗತಿಯನ್ನ ಶಿವಮೊಗ್ಗ
ಕ್ಷೇತ್ರದ ಸಂಸದ ರಾಘವೇಂದ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜನಸಾಮಾನ್ಯರ ಹಿತ ದೃಷ್ಟಿಯಿಂದ ತುರ್ತಾಗಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಅನುದಾನ ಒದಗಿಸಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈಗಾಗಲೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಗತಿಯಲ್ಲಿರುವ ಅನೇಕ ಯೋಜನೆಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ನಿರಂತರವಾಗಿ ಕಾಮಗಾರಿಗಳು ಸಾಗಲು ಸಹಕಾರವಾಗಿದೆ.
ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ನಿರಂತರವಾಗಿ ಸಾಗಲು ಎಲ್ಲಾ ರೀತಿಯಿಂದಲೂ ಅನುಕೂಲ ನೀಡುತ್ತಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಭೂ ಸಾರಿಗೆ ಮಂತ್ರಾಲಯ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ಅನಂತ ಅನಂತ ಧನ್ಯವಾದಗಳನ್ನ ಸಂಸದ ಬಿ.ವೈ.ರಾಘವೇಂದ್ರ ಅರ್ಪಿಸಿದ್ದಾರೆ.
