CM Siddaramaiah ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ವೃದ್ಧೆಯೊರ್ವರನ್ನು ನೆರೆ ಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಪ್ರಕರಣದ ತನಿಖೆ ಕೈಗೊಂಡು, ಆರೋಪಿಗಳ ಮೆಲೆ ಕಾನೂನು ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
CM Siddaramaiah ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ.
