Innerwheel Club ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿರುವ ಮಹಾರಾಣಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಿರಂತರ ಪರಿಶ್ರಮ ವಹಿಸಿ ಅಧ್ಯಯನ ಮಾಡುವುದರಿಂದ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.
ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಸಂಸ್ಥೆ ವತಿಯಿಂದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾ ಕಾರ್ಯಗಳನ್ನು ನಡೆಸುತ್ತಿದೆ. ಮಕ್ಕಳ ಶಿಕ್ಷಣಕ್ಕೆ ಪೂರಕವಾದ ಚಟುವಟಿಕೆಗಳನ್ನು ಆಯೋಜಿಸಿ ಪ್ರೋತ್ಸಾಹ ನೀಡಲಾಗುತ್ತಿದೆ. ನಿರಂತರವಾಗಿ ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತದೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಶ್ರೀ ರಂಜಿನಿ ದತ್ತಾತ್ರಿ ನೇತೃತ್ವದಲ್ಲಿ ಮಕ್ಕಳು ಮತ್ತು ಸರಳ ಸಾಮಾಜಿಕ ಜವಾಬ್ದಾರಿ ಕುರಿತು ಪಿಕ್ ಅಂಡ್ ಸ್ಪೀಚ್ ಮತ್ತು ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಜನಸಂಖ್ಯೆ ಹಾಗೂ ಸಾಮಾಜಿಕ ಜವಾಬ್ದಾರಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಮಕ್ಕಳಿಗೆ ಅರ್ಥವಾಗುವ ರೀತಿಯಲ್ಲಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
Innerwheel Club ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಕಾರ್ಯದರ್ಶಿ ಶೃತಿ ರಾಕೇಶ್ ಮಾತನಾಡಿದರು. ಯಶೋಧ ಗೌಳೆರ್ ಮಕ್ಕಳಿಗೆ ಹಲವು ಮಾಹಿತಿಗಳನ್ನು ನೀಡಿದರು. ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಅಧ್ಯಕ್ಷೆ ಲತಾ ಎಂ ರಮೇಶ್ ಅವರು ಇದೇ ಸಂದರ್ಭದಲ್ಲಿ ಶಿಕ್ಷಕರಿಗೆ ಗುರುಪೂರ್ಣಿಮೆ ಪ್ರಯಕ್ತ ಕಿರುಕಾಣಿಕೆಗಳನ್ನು ನೀಡಿ ಗೌರವಿಸಿದರು.
