University of Mysore ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ.ಪದ್ಧತಿಯ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಪರೀಕ್ಷೆ -2 ಮತ್ತು 3 ರಲ್ಲಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿಯುಸಿಗೆ ಸಮಾನಾಂತರ ಕೋರ್ಸ್ ಮಾಡಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
University of Mysore ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ ತಾಣ https://uucms.karnataka.gov.in ಅಥವಾ https:/www.cavamysore.karnataka.gov.in ಮೂಲಕ ಜು. 30ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಗಳನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಕಾಲೇಜಿನ ಡೀನ್ ತಿಳಿಸಿದ್ದಾರೆ.
University of Mysore ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿಗೆ ಪ್ರವೇಶಾತಿ ಪ್ರಕಟಣೆ
Date:
