All India Radio Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಜುಲೈ 22 ರಂದು ಸಂಜೆ 6.51 ರಿಂದ 7.30ರವರೆಗೆ ಹಲೋ ಕಿಸಾನ್‌ವಾಣಿ ನೇರಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಈ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕೃಷಿ ಇಲಾಖೆಯ ಉಪಯೋಜನಾಧಿಕಾರಿ ಮಂಜುನಾಥ್ ಅವರು ‘ಆತ್ಮಯೋಜನೆ’ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಹಾಗೂ ಸಹಾಯಕ ಕೃಷಿ ನಿರ್ದೇಶಕಿ ಶ್ರೀಮತಿ ಮಂಗಳ ರೇವಣಕರ್ ಅವರು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಘಟಕಗಳ ನಿಯಮ ಬದ್ದಗೊಳಿಸುವಿಕೆ ಕುರಿತು ಮಾಹಿತಿ ನೀಡಲಿದ್ದಾರೆ.
All India Radio Bhadravati ಕೇಳುಗರು ಹಾಗೂ ರೈತಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶ್ನೆಗಳನ್ನು ಕೇಳಿ ತಮ್ಮ ಸಂದೇಹಗಳಿಗೆ ಪರಿಹಾರ ಕಂಡುಕೊಳ್ಳಬಹುದು.
ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 (ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600) ಆಗಿದೆ.
