MESCOM ಶಿವಮೊಗ್ಗ ನಗರ ಉಪವಿಭಾಗ-3ರ ಗುಡ್‌ಲಕ್ ಸರ್ಕಲ್ ಹತ್ತಿರ, ಎಸ್.ವಿ. ಬಡಾವಣೆ, ಮೆಸ್ಕಾಂ ಕಚೇರಿಯಲ್ಲಿ ಜು. 21 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ ಜನ ಸಂಪರ್ಕ ಸಭೆ ಏರ್ಪಡಿಸಲಾಗಿದ್ದು, ಈ ವ್ಯಾಪ್ತಿಯ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ದೂರು, ಅಹವಾಲುಗಳನ್ನು ಸಲ್ಲಿಸುವಂತೆ ಮೆಸ್ಕಾಂ ತಿಳಿಸಿದೆ.