Friday, December 5, 2025
Friday, December 5, 2025

CM Siddaramaiah ಬಿಜೆಪಿ , ಜೆಡಿಎಸ್ ಒಂದೇ ವೇದಿಕೆಗೆ ಬರಲಿ.ನಮ್ಮ ಸರ್ಕಾರದ ಅಭಿವೃದ್ಧಿ ಬಗ್ಗೆ ಚರ್ಚಿಸೋಣ ಸಿದ್ಧರಾಮಯ್ಯ ಆಹ್ವಾನ

Date:

CM Siddaramaiah ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ.
ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ ಬರುತ್ತೇನೆ. ಅವರು ನನ್ನ ಈ ಸವಾಲು ಸ್ವೀಕರಿಸಲಿ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ

ಮೈಸೂರಿನಲ್ಲಿ ₹2,578 ಕೋಟಿಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಹಾಗೂ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ಭಾಗವಹಿಸಿ ಸಿದ್ಧರಾಮಯ್ಯನವರು ಮಾತನಾಡುತ್ತಿದ್ದರು.

ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅತೀ ಮತ್ಸರ ಪಡುತ್ತಿದ್ದಾರೆ.

ಬಿಜೆಪಿ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದರೆ, ಜೆಡಿಎಸ್‌ನ ಕುಮಾರಸ್ವಾಮಿ ಸ್ವಂತ ಶಕ್ತಿ ಮೇಲೆ ಯಾವತ್ತೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ರಾಜ್ಯದ ಜನರ ಪ್ರೀತಿ, ವಿಶ್ವಾಸ, ಅಭಿಮಾನ ಉಳಿಸಿಕೊಳ್ಳದ ಇವರಿಗೆ ನಮ್ಮ ಸರ್ಕಾರದ ಬಗ್ಗೆ ಟೀಕಿಸುವ ನೈತಿಕತೆ ಎಲ್ಲಿದೆ?

ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಪರವಾಗಿ ಇಲ್ಲ, ರಾಜ್ಯದ ಜನರ ಪರವಾಗಿ ಇಲ್ಲ. ಪ್ರತಿ ವರ್ಷ ನಾವು ರಾಜ್ಯದಿಂದ ಕೇಂದ್ರಕ್ಕೆ ಕೊಡುವ ತೆರಿಗೆಯಲ್ಲಿ ರಾಜ್ಯಕ್ಕೆ ಬರುತ್ತಿರುವುದು ಅತ್ಯಲ್ಪ. ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಳುವ ಧೈರ್ಯ ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಸೇರಿ ಸಂಸದರಾದ ಬೊಮ್ಮಾಯಿ ಸೇರಿ ಯಾರಿಗೂ ಇಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸೊಲ್ಲೆತ್ತದ ಬಿಜೆಪಿ-ಜೆಡಿಎಸ್ ರಾಜ್ಯದ ಜನಕ್ಕೆ ದ್ರೋಹ ಎಸಗಿದ್ದಾರೆ.

ನಾವು ಐದು ಗ್ಯಾರಂಟಿಗಳಲ್ಲದೆ ಅಭಿವೃದ್ಧಿ ಕಾರ್ಯಗಳಿಗೆ ಲಕ್ಷ ಕೋಟಿಯಷ್ಟು ಹಣ ಕೊಟ್ಟಿದ್ದೇವೆ. ನಾವು ಜಾರಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೇವಲ ಕಾಂಗ್ರೆಸ್ ನವರಿಗೆ ಕೊಟ್ಟಿದ್ದಲ್ಲ, ಬಿಜೆಪಿ-ಜೆಡಿಎಸ್ ಬೆಂಬಲಿಗರು ಮತ್ತು ಮತದಾರರಿಗೂ ಪ್ರತೀ ದಿನ, ಪ್ರತೀ ತಿಂಗಳೂ ಸರ್ಕಾರದ ನೆರವು ದೊರೆಯುತ್ತಿದೆ. ಮೊನ್ನೆಯಷ್ಟೆ ಶಕ್ತಿ ಯೋಜನೆಯಡಿಯಲ್ಲಿ ಪ್ರಯಾಣಿಸಿದ 500ನೇ ಕೋಟಿಯ ಮಹಿಳೆಗೆ ನಾನೇ ಉಚಿತ ಟಿಕೆಟ್ ಕೊಟ್ಟಿದ್ದೇನೆ. ಇದು ನಮ್ಮ ಸರ್ಕಾರದ ಬದ್ಧತೆ.

ಜವಾಹರಲಾಲ್ ನೆಹರೂ ಅವಧಿಯಿಂದ ಇಂದಿರಾಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಅವಧಿಯವರೆಗೂ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿರುವುದು ನಮ್ಮ ಪಕ್ಷದ ಸರ್ಕಾರ ಎನ್ನುವುದನ್ನು ಇಡೀ ದೇಶ ಮರೆಯಲು ಸಾಧ್ಯವಿಲ್ಲ.

ಆಹಾರ ಭದ್ರತಾ ಕಾಯ್ದೆ, ಕಡ್ಡಾಯ ಶಿಕ್ಷಣ ಕಾಯ್ದೆ, ನರೇಗಾ, ಮಾಹಿತಿ ಹಕ್ಕು ಕಾಯ್ದೆ ಈ ಎಲ್ಲವೂ ಆಗಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ. ಬಿಜೆಪಿ ಅವಧಿಯಲ್ಲಿ ಇವರು ಏನು ಮಾಡಿದ್ದಾರೆ ತೋರಿಸಲಿ?

CM Siddaramaiah ಮನುವಾದಿಗಳು ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ ಸಮುದಾಯಗಳ ಅಭಿವೃದ್ಧಿಯ ವಿರೋಧಿಗಳು, ಸಂವಿಧಾನದ ವಿರೋಧಿಗಳು. ಆದ್ದರಿಂದ ಸಾಮಾಜಿಕ ನ್ಯಾಯದ ಪರವಾಗಿರುವ ನಮ್ಮನ್ನು ಟೀಕಿಸುತ್ತಿದ್ದಾರೆ.
ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ದೇಶದ ಜನ ಮತ್ತು ಕಾಂಗ್ರೆಸ್ ಪಕ್ಷ ಬಿಜೆಪಿ ಮತ್ತು ಮನುವಾದಿಗಳ ಷಡ್ಯಂತ್ರವನ್ನು ಸೋಲಿಸುತ್ತಾರೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...