Thursday, June 18, 2026
Thursday, June 18, 2026

Minority Welfare Department Shimoga ವೃತ್ತಿಪರ ತರಬೇತಿ ಪಡೆಯಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ

Date:

Minority Welfare Department Shivamogga ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್, ಬೆಂಗಳೂರು ಇಲ್ಲಿ 18 ರಿಂದ 35 ವರ್ಷ ವಯೋಮಿತಿಯುಳ್ಳ, ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಮಲ್ಟಿ ಕುಸಿನ್ ಕುಕ್ (5 ತಿಂಗಳು), ಎಪ್ &ಡಿ ಸರ್ವಿಸ್ (4 ತಿಂಗಳು) ಹಾಗೂ ಎಂಟರ್‌ಪ್ರನೂರ್‌ಶಿಪ್ ಪ್ರೋಗ್ರಾಂ (1 ತಿಂಗಳು) ವೃತ್ತಿಪರ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಸೇರಿದವಾಗಿದ್ದು, ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ವಿದ್ಯಾರ್ಥಿಯು 10 ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Minority Welfare Department Shivamogga ಆಸಕ್ತರು https://sevasindhuservices.karnataka.gov.in ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಆಗಸ್ಟ್ 02 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://dom.karnataka.gov.in ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...