Saturday, September 26, 2026
Saturday, September 26, 2026

Shambhu Jakkeshwara Temple ಜಂಬೂರಿನ ಶಂಭು ಜಕ್ಕೇಶ್ವರ ದೇಗುಲ ಶೀಘ್ರ ಜೀರ್ಣೋದ್ಧಾರ ಕಾಮಗಾರಿ, ಪ್ರವಾಸೋದ್ಯಮ ಇಲಾಖೆ ಮಾಹಿತಿ

Date:

Shambhu Jakkeshwara Temple ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಂದಳಿಕೆ ಸಮೀಪದ ಜೈನ ಬಸದಿಯು ದಯಾನೀಯ ಸ್ಥಿತಿಯಲ್ಲಿದೆ. ಜೊತೆಗೆ ತಾಲ್ಲೂಕಿನ ಹಿರೇ ಜಂಬೂರು ಗ್ರಾಮದಲ್ಲಿರುವ ಶಂಭು ಜಕ್ಕೇಶ್ವರ ದೇವಾಲಯದ ಜೀರ್ಣೋದ್ಧಾರ ಆಗಬೇಕಾಗಿದೆ ಎಂಬ ವಿಚಾರವನ್ನು ʼಎಕ್ಸ್‌ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ಗಮನಕ್ಕೆ ತಂದಿದ್ದು, ತಕ್ಷಣವೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

Shambhu Jakkeshwara Temple ಅದರಂತೆ ಪರಿಶೀಲಿಸಿದಾಗ ಸದರಿ ಪ್ರವಾಸಿ ತಾಣವು ಭಾರತೀಯ ಪುರಾತತ್ವ ಇಲಾಖೆಗೆ ಒಳಪಡುವುದರಿಂದ ಸಂರಕ್ಷಣಾ ಕಾರ್ಯಗಳನ್ನು ಪುರಾತತ್ವ ಇಲಾಖೆಯಿಂದ ಕೈಗೊಳ್ಳಲಾಗುವುದು. ಜೊತೆಗೆ ಶಂಭು ಜಕ್ಕೇಶ್ವರ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವುದರಿಂದ ಸದರಿ ತಾಣದ ಜೀರ್ಣೋದ್ಧಾರ ಕಾಮಗಾರಿಗಳನ್ನು ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಿವಮೊಗ್ಗ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...