S. N. Channabasappa ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ಅಶೋಕನಗರ ಪ್ರದೇಶದಲ್ಲಿ ಕುಮಾರ್ ಎಂಬುವರ ಮನೆಯ ಮೇಲ್ಚಾವಣಿ ಕುಸಿದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತಾರಾದ ಶ್ರೀ ಮಾಯಣ್ಣಗೌಡರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ, ಕೂಡಲೇ ತಾತ್ಕಾಲಿಕ ವಸತಿ ಮತ್ತು ಅವಶ್ಯಕ ಮೂಲಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
S. N. Channabasappa ಈ ಸಂದರ್ಭದಲ್ಲಿ ಕುಮಾರ್ ಅವರ ಕುಟುಂಬಕ್ಕೆ ಮಹಾನಗರ ಪಾಲಿಕೆಯ ವತಿಯಿಂದ ತಕ್ಷಣ ನೆರವು ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸ್ಪಷ್ಟವಾಗಿ ತಿಳಿಸಿದರು.
