Friday, December 5, 2025
Friday, December 5, 2025

Shivamogga Rangayana ರಂಗಾಯಣಕ್ಕೆ ತಂತ್ರಜ್ಞರು & ಕಲಾವಿದರಿಂದ ಅರ್ಜಿ ಆಹ್ವಾನ

Date:

Shivamogga Rangayana ಶಿವಮೊಗ್ಗ ರಂಗಾಯಣದ ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರಿಗೆ 3 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ನೇಮಕ ಮಾಡಿಕೊಳ್ಳಲು ಆಸ್ತಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.11 ಕೊನೆಯ ದಿನಾಂಕವಾಗಿದ್ದು, ಅರ್ಜಿಯನ್ನು ರಂಗಾಯಣ ಶಿವಮೊಗ್ಗ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ ಫೇಸ್‌ಬುಕ್ ಮೂಲಕ ಅಥವಾ rangayanashivamogga.karnataka.gov.in ಮೂಲಕ ಹಾಗೂ ಗೂಗಲ್ ಫಾರ್ಮ್ ಮೂಲಕ ಸಹ ಡೌನ್‌ಲೋಡ್ ಮಾಡಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
3 ಜನ ತಂತ್ರಜ್ಞರನ್ನು ಗೌರವ ಸಂಭಾವನೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು(ಸಂಗೀತ/ಧ್ವನಿ-ಬೆಳಕು/ರAಗಸಜ್ಜಿಕೆ-ವಸ್ತçವಿಭಾಗ). ಪ್ರತಿ ವಿಭಾಗದಲ್ಲಿ ಕನಿಷ್ಠ 10 ವರ್ಷಗಳ ರಂಗಾನುಭವ ಹೊಂದಿರಬೇಕು. ತಂತ್ರಜ್ಞರಿಗೆ ಕನ್ನಡ ಭಾಷೆ ಓದುವ, ಬರೆಯುವ, ಗ್ರಹಿಸುವ ಸಾಮರ್ಥ್ಯವಿರಬೇಕು. ರಂಗಾನುಭವದ ಜೊತೆಗೆ ಶೈಕ್ಷಣಿಕ ಅರ್ಹತೆಗಳಿರುವವರಿಗೆ ಆದ್ಯತೆ ನೀಡಲಾಗುವುದು. ಈ ಆಯ್ಕೆಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇರುತ್ತದೆ. ತಂತ್ರಜ್ಞರಿಗೆ ಗೌರವ ಸಂಭಾವನೆಯಾಗಿ ಮಾಸಿಕ
ರೂ. 25,000 ಗಳನ್ನು ನೀಡಲಾಗುವುದು. ಇತರೆ ಯಾವುದೇ ಭತ್ಯೆಗಳು ಇರವುದಿಲ್ಲ. ಊಟ ವಸತಿ ವ್ಯವಸ್ಥೆ ತಂತ್ರಜ್ಞರೆ ಮಾಡಿಕೊಳ್ಳಬೇಕು. ತಂತ್ರಜ್ಞರು ನಿರೀಕ್ಷಿತ ಮಟ್ಟದಲ್ಲಿ ಕೆಲಸ ನಿರ್ವಹಿಸದೆ ಇದ್ದಲ್ಲಿ ಅವರ ನೇಮಕವನ್ನು ಯಾವುದೇ ಸಂದರ್ಭದಲ್ಲಿ ರದ್ದುಗೊಳಿಸುವ ಅಧಿಕಾರಿ ರಂಗಸಮಾಜಕ್ಕೆ ಇರುತ್ತದೆ. ತಂತ್ರಜ್ಞರ ನೇಮಕದ ಸಂದರ್ಭದಲ್ಲಿ ರೋಸ್ಟರ್ ನಿಯಮಗಳು ಕಡ್ಡಾಯವಾಗಿರುವುದಿಲ್ಲ. ತಂತ್ರಜ್ಞರಿಗೆ ವಯಸ್ಸಿನ ವಯೋಮಿತಿ ಇರುವುದಿಲ್ಲ.
Shivamogga Rangayana ಶಿವಮೊಗ್ಗ ರಂಗಾಯಣಕ್ಕೆ 12 ಜನ ಕಲಾವಿದರನ್ನು ಗೌರವ ಸಂಭಾವನೆಯ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು. 12 ಜನ ಕಲಾವಿದರಲ್ಲಿ ಕನಿಷ್ಟ 4 ಹುದ್ದೆ ಮಹಿಳೆಯರಿಗೆ ಮೀಸಲಿದ್ದು, 4 ಪರಿಶಿಷ್ಟ ಜಾತಿ/ವರ್ಗದ ಕಲಾವಿದರಿಗೆ ಮೀಸಲಾಗಿದೆ. ಈ ನೇಮಕದಲ್ಲಿ ಕನಿಷ್ಟ ಶೇ.50 ಹುದ್ದೆಗಳನ್ನು ಪ್ರಾದೇಶಿಕ ವಲಯದ ಕಲಾವಿದರಿಗೆ ಮೀಸಲಿಡಲಾಗಿದೆ. ರಂಗ ಪರಿಣತಿಯೇ ಪ್ರಥಮ ಅರ್ಹತೆ. ರಂಗಪ್ರಯೋಗಗಳಲ್ಲಿ ಭಾಗವಹಿಸಿದವರಿಗೆ ಆದ್ಯತೆಯನ್ನು ನೀಡಲಾಗುವುದು. ಆಯ್ಕೆಯಾಗುವ ಕಲಾವಿದರು ರೆಪರ್ಟರಿಯ ಭಾಗವಾಗಿದ್ದು, ರಂಗಶಿಕ್ಷಣ ಎಲ್ಲಾ ವಿಭಾಗಗಳಲ್ಲಿ ತರಬೇತಿ ಪಡೆಯುವುದರ ಜೊತೆಗೆ ಅಭಿಯನದ ಜವಾಬ್ದಾರಿಯನ್ನು ನಿಭಾಯಿಸಬೇಕು. ಆಯ್ಕೆಯಾದ ಕಲಾವಿದರಿಗೆ ಮಾಸಿಕ ರೂ.18,000 ಗೌರವ ಸಂಭಾವನೆಯಾಗಿ ನೀಡಲಾಗುವುದು. ಇತರೆ ಯಾವುದೇ ಭತ್ಯೆಗಳನ್ನು ನೀಡಲಾಗುವುದಿಲ್ಲ. ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲಾವಿದರೇ ಮಾಡಿಕೊಳ್ಳಬೇಕು. ಕಲಾವಿದರ ವಯಸ್ಸು ಕನಿಷ್ಟ 18 ವರ್ಷಗಳಿಂದ ಗರಿಷ್ಟ 32 ವರ್ಷ ಮೀರಬಾರದು. ಪಾರಂಪರಿಕ ಕಲೆಯ ಕುಟುಂಬಗಳಿAದ ಬಂದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಇಂತಹ ಪ್ರಕರಣದಲ್ಲಿ ವಯೋಮಿತಿಯನ್ನು 5 ವರ್ಷ ಸಡಿಲಿಸಬಹುದು. ಕಲಾವಿದರ ಆಯ್ಕೆಯನ್ನು ಪಾರದರ್ಶಕವಾಗಿ ರಂಗಸಮಾಜವು ಆಯಾ ರಂಗಾಯಣಗಳ ಅಧ್ಯಕ್ಷತೆಯಲ್ಲಿ ರಚಿಸುವ ಉಪಸಮಿತಿಯು ಸಂದರ್ಶನದ ಮೂಲಕ ಮಾಡುತ್ತದೆ.
ಮೇಲ್ಕಂಡ ತಂತ್ರಜ್ಞರು ಹಾಗೂ ಕಲಾವಿದರು ಆಯಾ ರಂಗಾಯಣ ನಿರ್ದೇಶಕರ ಹಾಗೂ ಆಡಳಿತಾಧಿಕಾರಿಗಳ ಆಡಳಿತ ನಿಯಂತ್ರಣಕ್ಕೆ ಒಳಪಟ್ಟಿರುತ್ತಾರೆ. ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆಯು ರಂಗಾಯಣ ಚಟುವಟಿಕೆಗಳ ಅಗತ್ಯದ ಹಿನ್ನೆಯಲ್ಲಿ ಗೌರವ ಸಂಭಾವನೆ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇವು ಸರ್ಕಾರದ ಖಾಯಂ ಹುದ್ದೆಗಳಾಗಿರುವುದಿಲ್ಲ. ಆಯ್ಕೆಯಾದ ಕಲಾವಿದರು ತಂತ್ರಜ್ಞರು ರಂಗಸಮಾಜವು ವಿಧಿಸುವ ಷರತ್ತುಗಳಿಗೆ ಬದ್ದರಾಗಿರತಕ್ಕದ್ದು.
ಆಸಕ್ತ ಕಲಾವಿದರು, ತಂತ್ರಜ್ಞರು ಭರ್ತಿ ಮಾಡಿದ ಅರ್ಜಿಯನ್ನು ಆ,11 ರೊಳಗೆ ಆಡಳಿತಾಧಿಕಾರಿಗಳು, ರಂಗಾಯಣ, ಸುವರ್ಣ ಸಂಸ್ಕೃತಿ ಭವನ, ಅಶೋಕನಗರ, ಹೆಲಿಪ್ಯಾಡ್ ಹಿಂಭಾಗ ಶಿವಮೊಗ್ಗ-577201 ಈ ವಿಳಾಸಕ್ಕೆ ಖುದ್ದಾಗಿ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ; admn.rangayanashivamogga@gmail.com ಮೂಲಕ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-256353 ಗೆ ಸಂಪರ್ಕಿಸಬಹುದು ಎಂದು ರಂಗಾಯಣದ ಆಡಳಿತಾಧಿಕಾರಿ ಡಾ.ಶೈಲಜಾ ಎ.ಸಿ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...