Santosh Lad ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಂದು ಬೆಳಗಾವಿಯ ಯಮನಾಪೂರ ಕೈಗಾರಿಕ ಪ್ರದೇಶದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ,ಬೆಳಗಾವಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರಿಗೆ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಛಯಗಳಿಗೆ ಉದ್ಘಾಟನೆ ನೆರವೇರಿಸಿದರು. ಇದರೊಂದಿಗೆ ವೇದಿಕೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ “ಸ್ಮಾರ್ಟ್ ಕಾರ್ಡ್ “ವಿತರಿಸಿ ಇಲಾಖೆಯ ಯೋಜನೆಗಳ ಕುರಿತು ಅರಿವು Santosh Lad ಮೂಡಿಸಿದರು.ಇದಕ್ಕೂ ಮುನ್ನ ಜಿಲ್ಲಾ ಕಾರ್ಮಿಕರ ಆಗುಹೋಗುಗಳ ಬಗ್ಗೆ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಉದ್ಘಾಟನಾ ಹಾಗೂ ಸಭಾ ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕರಾದ ಬಾಬಾ ಸಾಹೇಬ್ ಪಾಟೀಲ್,ಶ್ರೀನಿವಾಸ ಮಾನೆ ಸೇರಿದಂತೆ ಜಿಲ್ಲೆಯ ಪ್ರಮುಖರು, ಕಾರ್ಮಿಕ ಇಲಾಖೆಯ ಪ್ರಮುಖ ಅಧಿಕಾರಿಗಳು ಸಚಿವರೊಂದಿಗೆ ಪಾಲ್ಗೊಂಡಿದ್ದರು.
Santosh Lad ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಉದ್ಘಾಟನೆ
Date:
