Red Cross ಪ್ರತಿಯೊಬ್ಬರೂ ರಕ್ತದಾನ ಮಾಡುವುದರ ಮೂಲಕ ಇನ್ನೊಂದು ಜೀವ ಉಳಿಸಲು ನೆರವಾಗಬೇಕು ಎಂದು ಶಿವಮೊಗ್ಗ ರೋಟರಿ ಪೂರ್ವದ ಅಧ್ಯಕ್ಷರಾದ ಕಿಶೋರ್ ಕುಮಾರ್ ಡಿ ಅವರು ಕರೆ ಕೊಟ್ಟರು
ಶಿವಮೊಗ್ಗ ರೋಟರಿ ಪೂರ್ವ, ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರ ಸ್ಪಂದನ ಹೆಲ್ತ್ ಫೌಂಡೇಶನ್ ಟ್ರಸ್ಟ್ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಎನ್ಎಸ್ಎಸ್ ಘಟಕಗಳು ಎನ್ ಸಿ ಸಿ ಮತ್ತು ಇತರೇ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತದಾನದ ಮಹತ್ವದ ಬಗ್ಗೆ ತಮ್ಮ ಸ್ವಂತ ಅನುಭವವನ್ನು ವಿವರಿಸುತ್ತಾ ಇಂತಹ ಶಿಬಿರ ಏರ್ಪಡಿಸುವುದು ಅತ್ಯಂತ ಶ್ರೇಷ್ಠವಾದ ಕೆಲಸ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಮಮತಾ ರವರು ಮಾತನಾಡುತ್ತಾ ತಮ್ಮ ಕಾಲೇಜಿನಲ್ಲಿ ವರ್ಷಕ್ಕೆ ಮೂರು ಬಾರಿಯಾದರೂ ಇಂಥ ಶಿಬಿರವನ್ನು ಏರ್ಪಡಿಸುತ್ತೇವೆ ಎಂದು ತಿಳಿಸುತ್ತಾ ನೆರೆದಿದ್ದ ವಿದ್ಯಾರ್ಥಿಗಳಿಗೆ ರಕ್ತದಾನ ಮಾಡುವಂತೆ ಪ್ರೇರೇಪಿಸಿದರು
ಇದೆ ಸಂದರ್ಭದಲ್ಲಿ ಮಾತನಾಡಿದ ಶಿವಮೊಗ್ಗ ರೋಟರಿ ಪೂರ್ವದ ಕಾರ್ಯದರ್ಶಿಯಾದ ಧನಂಜಯ್ ರವರು ರಕ್ತದಾನ ಮಾಡು ದರಿಂದ ಉಂಟಾಗುವ ಆರೋಗ್ಯದ ಪ್ರಯೋಜನಗಳ ಬಗ್ಗೆ ವಿವರಿಸಿದರು.
Red Cross ಎಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನ ರಕ್ತದಾನ , ರಕ್ತದಾನ ಮಾಡುವುದರಿಂದ ಮತ್ತೊಂದು ಜೀವ ಉಳಿಸಲು ಸಹಾಯವಾಗುತ್ತದೆ ಅಲ್ಲದೆ ದೈಹಿಕ ಹಾಗೂ ಮಾನಸಿಕ ಆರೋಗ್ಯವು ವೃದ್ಧಿಯಾಗುತ್ತದೆ ಎಂದು ಮತ್ತೋರ್ವ ಅತಿಥಿ ಸ್ವಯಂ ಪ್ರೇರಿತ ರಕ್ತ ದಾನಿಗಳ ಸಂಘದ ಮಾಜಿ ಅಧ್ಯಕ್ಷರಾದ ಜಿ ವಿಜಯ್ ಕುಮಾರ್ ಅವರು ಅಭಿಮತ ವ್ಯಕ್ತಪಡಿಸಿದರು
ಉಪಸ್ಥಿತರಿದ್ದ ವೈದ್ಯಾಧಿಕಾರಿಗಳು, 119ನೇ ಬಾರಿ ರಕ್ತದಾನ ಮಾಡಿರುವ ಹಿರಿಯ ರಕ್ತದಾನಿ ಧರಣೇಂದ್ರ ದಿನಕರ್, ಆರ್.ಗಿರೀಶ್ ಮತ್ತಿತರು ಸುರಕ್ಷಿತ ರಕ್ತದಾನದ ಮಹತ್ವದ ಬಗ್ಗೆ ಸಭೆಗೆ ವಿವರಿಸಿದರು . ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘದ ಸದಸ್ಯರಾದ ಶ್ರೀಯುತ ಆರ್ ಮನೋಹರ್,,ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ್ ಕೆ.ಎಂ, ಮಾಜಿ ಪ್ರಾಂಶುಪಾಲರಾದ ಜಗದೀಶ್
ಮತ್ತು ಇತರೆ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿ ರಕ್ತದಾನಿಗಳು ಪಾಲ್ಗೊಂಡಿದ್ದರು
