Shimoga News ಆತ್ಮವಿಶ್ವಾಸ ಹಾಗೂ ನಿರಂತರ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಚಿನ್ನದ ಪದಕ ವಿಜೇತೆ ಆರ್.ವಂದನಾ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಗುರು ಹಿರಿಯರ ಮಾರ್ಗದರ್ಶನದಿಂದ ಇಂಜಿನಿಯರಿಂಗ್ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆಯಲು ಸಾಧ್ಯವಾಯಿತು. ಬಾಲ್ಯದಿಂದಲೇ ಜೀವನದಲ್ಲಿ ಏನಾದರೂ ಸಾಧಿಸುವ ಛಲ ಇತ್ತು. ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಷನ್ ವಿಭಾಗದಲ್ಲಿ ಟಾಪರ್ ಆಗಿದ್ದೇನೆ ಎಂದು ತಿಳಿಸಿದರು.
ವಿಟಿಯು ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ಆರ್.ವಂದನಾ ಅವರನ್ನು ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ನೆಪ್ಚೂನ್ ಕಿಶೋರ್‌ಕುಮಾರ್ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ನೆಪ್ಚೂನ್ ಕಿಶೋರ್‌ಕುಮಾರ್ ಮಾತನಾಡಿ, ವಂದನಾ ಅವರ ಸಾಧನೆ ನಮ್ಮ ಜಿಲ್ಲೆಗೆ ಕೀರ್ತಿ ತಂದಿದ್ದು, ಇವರ ಸಾಧನೆ ಇತರ ವಿದ್ಯಾರ್ಥಿಗಳಿಗೂ ಸ್ಪೂರ್ತಿಯಾಗಿದೆ. ವಂದನಾ ಅವರು ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲಿ ಎಂದು ಶುಭಹಾರೈಸಿದರು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಬೆಳೆದು, ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿನಿ ವಂದನಾ ಅವರು ಉನ್ನತ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಿದರೆ ಸಾಧನೆ ಸುಲಭ ಎಂದು ತಿಳಿಸಿದರು.
Shimoga News ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ವಿದ್ಯಾರ್ಥಿನಿ ವಂದನಾ ಅವರ ಸಾಧನೆ ನಮ್ಮೆಲ್ಲರಿಗೂ ಹೆಮ್ಮ ತರುವಂತಹ ಸಂಗತಿ. ಇಂತಹ ಪ್ರತಿಭೆ ಎಲ್ಲರಿಗೂ ಮಾದರಿ ಎಂದು ಹೇಳಿದರು.
ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯಕುಮಾರ್, ನಮ್ಮ ಟಿವಿಯ ಶ್ರೀಕಾಂತ್, ತರುಣ್, ಪ್ರಾಧ್ಯಾಪಕಿ ಡಾ. ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು.
Shimoga News ಬಾಲ್ಯದಿಂದಲೇ ಏನಾದರೂ ಸಾಧಿಸುವ ಛಲ ಇತ್ತು- ಆರ್.ವಂದನಾ
Date:
