S.N. Channabasappa ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಇಂದು ಶಿವಮೊಗ್ಗದ ಲಗಾನ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ’ ಭವನದ ಲೋಕಾರ್ಪಣೆ ಹಾಗೂ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮ ಮತ್ತು ಅರಿವು ಜಾಗೃತಿಯ ಸಭೆಯಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಮಾತನಾಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, “ಕಾರ್ಮಿಕರು ನಮ್ಮ ಸಮಾಜದ ಆಧಾರ ಶಕ್ತಿಯಾಗಿದ್ದಾರೆ. ಅವರ ಬದುಕು ಸುಧಾರಿಸಲು ಹಲವು ಜವಾಬ್ದಾರಿತ್ಮಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಇಂದಿನ ವಸತಿ ಯೋಜನೆಯು ಕಾರ್ಮಿಕರ ಜೀವನಮಟ್ಟವನ್ನು ಸುಧಾರಿಸಲು ನಂಬಿಕೆಯದಾಯಕ ಹೆಜ್ಜೆಯಾಗಲಿದೆ” ಎಂಬ ಆಶಯ ವ್ಯಕ್ತಪಡಿಸಿದರು.
S.N. Channabasappa ಈ ಸಂದರ್ಭದಲ್ಲಿ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್, ಸಂಸದರಾದ ಬಿ ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿಎಸ್ ಅರುಣ್, ಡಾ. ಧನಂಜಯ್ ಸರ್ಜಿ, ಶಿವಮೊಗ್ಗ ಗ್ರಾಮಾಂತರ ಶಾಸಕಿಯಾದ ಶ್ರೀಮತಿ.ಶಾರದಾ ಪೂರ್ಯ ನಾಯಕ್, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಶ್ರೀಮತಿ ಪಲ್ಲವಿ ಜಿ. ಜಿಲ್ಲಾ ಆಡಳಿತದ ಅಧಿಕಾರಿಗಳು, ವಿವಿಧ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಹಾಗೂ ನೂರಾರು ಕಾರ್ಮಿಕರು ಉಪಸ್ಥಿತರಿದ್ದರು.
