Sunday, September 20, 2026
Sunday, September 20, 2026

Keladi Shivappa Nayaka University ಶಿವಪ್ಪನಾಯಕ ಕೃಷಿ ವಿವಿ ಯಿಂದ ಉತ್ತಮ ರೈತ/ ರೈತಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Date:

Keladi Shivappa Nayaka University ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿ ವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಪ್ರಗತಿ ಪರ ರೈತ/ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಿದ ರೈತ/ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಆಯ್ಕೆ ಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು, ಈ ಪ್ರಶಸ್ತಿಯನ್ನು ಅಕ್ಟೋಬರ್-2025 ರಲ್ಲಿ ಜರುಗುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರಧಾನ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಯಶಸ್ವಿ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಪಡೆಯಬಹುದು ಅಥವಾ https://www.uahs.edu.in/ ನಲ್ಲಿ ಲಭ್ಯವಿರುವ ಅರ್ಜಿ ತೆಗೆದುಕೊಂಡು ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 15ನೇ ಸೆಪ್ಟೆಂಬರ್ 2025 ರ ಒಳಗೆ ತಲುಪುವಂತೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.

Keladi Shivappa Nayaka University
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರುಗಳು, ಕೃಷಿ ವಿಜ್ಞಾನ ಕೇಂದ್ರ ಇವರನ್ನು ಸಂಪರ್ಕಿಸಬೇಕಾದ ಸಂಖ್ಯೆಗಳು: ಶಿವಮೊಗ್ಗ- 9480838976, 8277932600, ದಾವಣಗೆರೆ-9480838209, ಚಿಕ್ಕಮಗಳೂರು- 9480838203, 8277930890,

ಉಡುಪಿ-9480838202, 8277932500, ಚಿತ್ರದುರ್ಗ-9480838201, ದಕ್ಷಿಣ ಕನ್ನಡ- 8794706468, 8277931060, ಮಡಿಕೇರಿ- 9480838210, 7259005540

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...