Saturday, December 6, 2025
Saturday, December 6, 2025

S.N.Chennabasappa ಗಾಂಧಿ ಬಜಾರ್ & ನೆಹರು ರಸ್ತೆಯ ವರ್ತಕರ ಸಮಸ್ಯೆಗಳ ಬಗ್ಗೆ ಶಾಸಕ ಚೆನ್ನಿ ಸಭೆ

Date:

S.N.Chennabasappa ಶಾಸಕರ ಕಚೇರಿಯಾದ ಕರ್ತವ್ಯ ಭವನದಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮಾನ್ಯ ಪಾಲಿಕೆಯ ಆಯುಕ್ತರಾದ ಶ್ರೀ ಮಾಯಣ್ಣ ಗೌಡ ಅವರೊಂದಿಗೆ ನೆಹರು ರಸ್ತೆ ಹಾಗೂ ಗಾಂಧಿ ಬಜಾರ್ ವರ್ತಕರ ಸಂಘದ ಸದಸ್ಯರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ವ್ಯಾಪಾರಿಗಳು ಎದುರಿಸುತ್ತಿರುವ ವಿವಿಧ ಮೂಲಭೂತ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಮುಂದಿನ ದಿನಗಳಲ್ಲಿ ನಗರದಲ್ಲಿ ಶಿಸ್ತುಪಾಲಿತ ಹಾಗೂ ಸುರಕ್ಷಿತ ವ್ಯಾಪಾರದ ವಾತಾವರಣವನ್ನು ಸೃಷ್ಟಿಸುವ ಉದ್ದೇಶದಿಂದ, ಈ ಕೆಳಕಂಡ ಪ್ರಮುಖ ಅಂಶಗಳ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿದರು:

  1. ಗಾಂಧಿ ಬಜಾರ್‌ ಕೆಲ ಕಿಡಿಗೇಡಿಗಳಿಂದ ಉಂಟಾಗುತ್ತಿರುವ ಟ್ರಾಫಿಕ್ ಅಶಿಸ್ತಿಗೆ ಸಂಬಂಧಿಸಿದಂತೆ ತಕ್ಷಣದ ನಿಗಾವಹಿಸಲು ಸೂಚನೆ ನೀಡಿದರು.
  2. ಅನಧಿಕೃತವಾಗಿ ಬೇರೆ ರಾಜ್ಯಗಳಿಂದ ಬಂದಿರುವ ಕೆಲವು ವ್ಯಾಪಾರಿಗಳು ಕಾನೂನು ಉಲ್ಲಂಘಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
  3. ಐಡಿ ಕಾರ್ಡ್ ಇಲ್ಲದಂತೆ ವ್ಯಾಪಾರ ನಡೆಸುತ್ತಿರುವವರ ಬಗ್ಗೆ ಪರಿಶೀಲನೆ ನಡೆಸಿ, ಸರಿಯಾದ ದಾಖಲೆ ಇಲ್ಲದವರ ವಿರುದ್ಧ ಕ್ರಮ ವಹಿಸಲು ತಿಳಿಸಿದರು.
  4. ಅಸಮರ್ಪಕವಾಗಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವ ಪ್ರವೃತ್ತಿ, ವ್ಯಾಪಾರ ಪ್ರದೇಶಗಳಲ್ಲಿ ಗಂಭೀರ ಟ್ರಾಫಿಕ್ ಸಮಸ್ಯೆ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ, ಪಾರ್ಕಿಂಗ್ ನಿಯಮಗಳ ಅಳವಡಿಕೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು.
  5. ಹಿರಿಯ ನಾಗರಿಕರು ಹಾಗೂ ಮಹಿಳೆಯರಿಗೆ ಅನಗತ್ಯ ಕಿರುಕುಳ ನೀಡುತ್ತಿರುವ ಕೆಲ ಕಿಡಿಗೇಡಿಗಳ ವಿರುದ್ಧ ಕ್ರಮ ವಹಿಸುವಂತೆ ಸೂಚಿಸಿದರು.
  6. ಹಬ್ಬದ ಸಂದರ್ಭಗಳಲ್ಲಿ ಉಂಟಾಗುವ ಪಾರ್ಕಿಂಗ್ ಗೊಂದಲಗಳನ್ನು ನಿಯಂತ್ರಿಸಲು, ಪ್ರತ್ಯೇಕ ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದರು.
  7. ನೆಹರು ರಸ್ತೆಯಲ್ಲಿನ ಪಾರ್ಕಿಂಗ್ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದರು.
  8. ನೆಹರು ರಸ್ತೆಯಲ್ಲಿನ ಅಪಾಯಕಾರಿಯಾದ ಗುಂಡಿಗಳನ್ನು ತ್ವರಿತವಾಗಿ ದುರಸ್ತಿ ಮಾಡಬೇಕೆಂದು ತಿಳಿಸಿದರು.
  9. ಡಿವೈಡರ್‌ಗಳ ಮೇಲೆ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಿ, ದಾರಿಗಳ ದೃಶ್ಯತೆ ಮತ್ತು ಸುರಕ್ಷತೆಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
  10. ಅನಧಿಕೃತವಾಗಿ ಹಾಕಲಾಗಿರುವ ಫ್ಲೆಕ್ಸ್ ಬೋರ್ಡುಗಳು, ನಗರ ಸೌಂದರ್ಯವನ್ನು ಹಾನಿಗೊಳಿಸುತ್ತಿರುವುದರಿಂದ ಅವನ್ನು ತೆರವುಗೊಳಿಸಲು ತಕ್ಷಣದ ಕ್ರಮ ಕೈಗೊಳ್ಳಲು ಆದೇಶಿಸಿದರು.

S.N.Chennabasappa ಈ ಸಭೆಯಲ್ಲಿ ಪಾಲಿಕೆಯ ಅಧಿಕಾರಿಗಳು, ವರ್ತಕರ ಸಂಘದ ಪ್ರತಿನಿಧಿಗಳು ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...