Wednesday, July 8, 2026
Wednesday, July 8, 2026

Rotary Club Shimoga ಮಗು ಆರೋಗ್ಯವಾಗಿರಬೇಕೆಂದರೆ ತಾಯಿ ಎದೆ ಹಾಲು ಕಡ್ಡಾಯ ಕುಡಿಸಬೇಕು- ರಾಜಶ್ರೀಬಸವರಾಜ್

Date:

Rotary Club Shimoga ತಾಯಿಯ ಎದೆ ಹಾಲು ಅಮೃತಕ್ಕೆ ಸಮಾನ. ಮಗು ಆರೋಗ್ಯವಾಗಿ ಇರಬೇಕು ಎಂದರೆ ಕಡ್ಡಾಯವಾಗಿ ತಾಯಿ ಎದೆ ಹಾಲು ನೀಡಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಆನ್ಸ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ ಹೇಳಿದರು.
ಗುರುಪುರದ ಅಂಗನವಾಡಿಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ಗರ್ಭಿಣಿ ಹಾಗೂ ಮಹಿಳೆಯರಿಗೆ ಆಯೋಜಿಸಿದ್ದ ಸ್ತನ್ಯಪಾನ ಸಪ್ತಾಹ ತಾಯಿ ಎದೆ ಹಾಲು ಬಗ್ಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಗುವಿನ ಬೆಳವಣಿಗೆಗೆ ಸ್ತನ್ಯಪಾನವು ಅತ್ಯಂತ ಅವಶ್ಯಕವಾಗಿದೆ. ತಾಯಿಯ ಎದೆ ಹಾಲಿನಿಂದ ಮಗುವಿಗೆ ಉತ್ತಮ ಪೋಷಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ತಾಯಿ ಮತ್ತು ಮಗುವಿನ ನಡುವೆ ಪ್ರೀತಿ ಹೆಚ್ಚಿಸುತ್ತದೆ ಎಂದು ತಿಳಿಸಿದರು.
Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ ಮಾತನಾಡಿ, ರೋಟರಿ ಸಂಸ್ಥೆ ಸಮಾಜದಲ್ಲಿ ಆರೋಗ್ಯಕರ ವಾತಾವರಣ ಸೃಷ್ಟಿ ಮಾಡುವಲ್ಲಿ ಸಂಸ್ಥೆಯು ನಿರಂತರವಾಗಿ ಶ್ರಮಿಸುತ್ತಿದೆ. ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಪಾತ್ರ ಮಹತ್ತರವಾದದ್ದು. ಶಿವಮೊಗ್ಗ ನಗರದಲ್ಲಿ ಸರ್ಜಿ ಆಸ್ಪತ್ರೆ ಜೊತೆಗೂಡಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ತೆರೆಯಲಾಗಿದೆ ಎಂದು ತಿಳಿಸಿದರು.
ರೋಟರಿ ಸಂಸ್ಥೆಯು ಪರಿಸರ, ರಸ್ತೆ ಸುರಕ್ಷತೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಿರಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದೆ ಎಂದರು.
ವಲಯ ಸೇನಾನಿ ಕಿರಣ್‌ಕುಮಾರ್ ಜಿ ಮಾತನಾಡಿ, ಆರೋಗ್ಯವೂ ಮಾನವನ ಅಭಿವೃದ್ಧಿಗೆ ಅತ್ಯಂತ ಸಹಕಾರಿಯಾಗಿದೆ. ಆರೋಗ್ಯ ಎಂಬ ಪದವು ಸಂಪೂರ್ಣ ಭಾವನಾತ್ಮಕ, ಮಾನಸಿಕ ಮತ್ತು ದೈಹಿಕ ಯೋಗ ಕ್ಷೇಮದ ಸ್ಥಿತಿ ಸೂಚಿಸುತ್ತದೆ. ಇನ್ನು ಹೆಚ್ಚು ಹೆಚ್ಚು ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ನಡೆಸಬೇಕು ಎಂದರು.
ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಸುಲೋಚನಾ ಅವರು ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಕುರಿತು ಮಾಹಿತಿ ನೀಡಿದರು. ಎಫ್ ಪಿ ಎ ಐ ನ ಸತೀಶ್ ಹಾಗೂ ಅಂಗನವಾಡಿಯ ಮೆಹರುನ್ನೀಸಾ, ಸೋನಾ ಬಾಯಿ ಮತ್ತು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಜಯಶೀಲ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಜ್ಯೋತಿ ಶ್ರೀರಾಮ್, ಮಥುರಾ ಧನಂಜಯ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...