Monday, October 19, 2026
Monday, October 19, 2026

Kuvempu University ಕುವೆಂಪು ವಿವಿ ಪಿಜಿ /ಪಿಜಿ ಡಿಪ್ಲೊಮಾ, ಪದವಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Date:

Kuvempu University 2025-26ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಪದವಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 18ರವರೆಗೆ ಅವಧಿ ವಿಸ್ತರಿಸಲಾಗಿದೆ.

ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಆಗಸ್ಟ್ 08ರವರೆಗೆ ನಿಗದಿಗೊಳಿಸಲಾಗಿತ್ತು.

ಆದರೆ ಕುವೆಂಪು ವಿಶ್ವವಿದ್ಯಾಲಯದ ರಿಪೀಟರ್ಸ್ ಪರೀಕ್ಷೆ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಸ್ನಾತಕ ಪದವಿಗಳ ಪರೀಕ್ಷೆಗಳ ಫಲಿತಾಂಶ ಪ್ರಕಟಣೆ ವಿಳಂಬವಾಗಿರುವುದನ್ನು ಗಮನಿಸಿ, ಅಂತಹ ವಿದ್ಯಾರ್ಥಿಗಳಿಗೂ ಅನುಕೂಲವಾಗಲೆಂದು ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಯುಯುಸಿಎಂಎಸ್ ಪೊರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅಥವಾ ಆಫ್ ಲೈನ್ ಮೂಲಕ ಸಂಬಂಧಿಸಿದ ವಿಭಾಗಗಳಿಗೆ ನೇರವಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Kuvempu University ಪ್ರವೇಶಾತಿ ಕೌನ್ಸಿಲಿಂಗ್ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪರಿಷ್ಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...