shivamogga veterinary college ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಪ್ರಾಣಿ ಆಹಾರ ಶಾಸ್ತ್ರ, ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ, ಜಾನುವಾರು ಸಾಕಾಣಕಾ ಸಂಕೀರ್ಣ (ಕುಕ್ಕುಟ/ಜಾನುವಾರು ಉತ್ಪಾದನಾ ನಿರ್ವಹಣ ಶಾಸ್ತ್ರ), ಪಶುವೈದ್ಯಕೀಯ ಶರೀರ ಕ್ರಿಯಾ ಮತ್ತು ಜೀವ ರಸಾಯನ ಶಾಸ್ತ್ರ, ಪಶುವೈದ್ಯಕೀಯ ಶಸ್ತ್ರಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ, ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ-ಚಿಕಿತ್ಸಾ ವಿಭಾಗ ಮತ್ತು ಶಸ್ತ್ರ ಚಿಕಿತ್ಸೆ ವಿಭಾಗಗಳಲ್ಲಿ ಸಹಾಯಕ ಪ್ರಾದ್ಯಾಪಕರ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತೀಯ ಕೃಷಿ shivamogga veterinary college ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವಂತೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.
