Rotary Club Shivamogga ಇಂದಿನ ಒತ್ತಡದ ಜೀವನಶೈಲಿಯಲ್ಲಿ ಆರೋಗ್ಯದ ಬಗ್ಗೆ ಗಮನಿಸುತ್ತಿಲ್ಲ. ಸ್ತನ ಕ್ಯಾನ್ಸರ್ ಮಹಿಳೆಯರಲ್ಲಿ ಕಂಡುಬರುವ ಸಾಮಾನ್ಯ ಕ್ಯಾನ್ಸರ್ ಆಗಿದೆ. ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದಾಗ ಗುಣಪಡಿಸುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ ಬಿ ಹೇಳಿದರು.
ಗೋಪಾಳದ ರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನಾರಾಯಣ ಹೃದ್ರಾಲಯ ಆಸ್ಪತ್ರೆಯ ಸಹಯೋಗದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ಮತ್ತು ಮೆಮೊಗ್ರಫಿ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಆರೋಗ್ಯದ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ. ರೋಟರಿ ಸಂಸ್ಥೆಯು ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸುತ್ತಿದೆ. ನಿರಂತರವಾಗಿ ಆರೋಗ್ಯ ಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿದೆ. ಏಕೆಂದರೆ ಆರೋಗ್ಯವೇ ಮಹಾಭಾಗ್ಯ. ಆರೋಗ್ಯವೇ ಸಂಪತ್ತು ಎಂದು ತಿಳಿಸಿದರು.
ನಾರಾಯಣ ಹೃದಯಾಲಯದ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಮತ್ತು ರಂಗನಾಥ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಶಿಬಿರಕ್ಕೆ ಸಹಕಾರ ನೀಡಿದರು. ಕಾರ್ಯಕ್ರಮದಲ್ಲಿ 200 ಜನ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
Rotary Club Shivamogga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನ ಈಶ್ವರ್, ಆನಂದ್, ಬಲರಾಮ್, ರಮೇಶ್, ಸಂತೋಷ್, ಮಂಜುನಾಥ್, ಜಿ.ಎನ್.ಪ್ರಕಾಶ್, ಜಗದೀಶ್, ಪ್ರೊ. ಚೆನ್ನಪ್ಪ, ಧರ್ಮೇಂದ್ರ ಸಿಂಗ್, ರವಿ ಕೊಟೋಜಿ, ಜ್ಯೋತಿ ಶ್ರೀ ರಾಮ್, ಗೀತಾ ಜಗದೀಶ್, ಅನ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ್, ಮಥುರಾ ಧನಂಜಯ್, ಕ್ಲಬ್‌ನ ಎಲ್ಲಾ ಸದಸ್ಯರು ಭಾಗವಹಿಸಿದ್ದರು. ನಾರಾಯಣ ಹೃದಯಾಲಯದ ಸಿಬ್ಬಂದಿ ಮತ್ತು ರಂಗನಾಥ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು.
