Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕಿ ಡಾ. ಲಕ್ಷ್ಮೀದೇವಿ ಗೋಪಿನಾಥ್ ಅವರು ಮಂಗಳೂರಿನ ವಿಜನ್ ಫೌಂಡೇಶನ್ ವತಿಯಿಂದ ಅಸಾಮಾನ್ಯ ಮಹಿಳೆ ಪ್ರಶಸ್ತಿ ಸ್ವೀಕರಿಸಿರುವುದಕ್ಕೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಲಕ್ಷ್ಮೀದೇವಿ ಅವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ವತಿಯಿಂದ ಮಹಿಳಾ ಉದ್ಯಮಿ ಪ್ರಶಸ್ತಿಯು ಸಹ ದೊರಕಿದೆ.. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪ್ರಭಾರ ಅಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ, ಎಲ್ಲ ನಿರ್ದೇಶಕರು, ಮಾಜಿ ಅಧ್ಯಕ್ಷರಾದ ಡಿ.ಎಂ.ಶಂಕ್ರಪ್ಪ, ಜೆ.ಆರ್.ವಾಸದೇವ್, ಟಿ.ಆರ್.ಅಶ್ವತ್ಥ್ ನಾರಾಯಣ್ ಮತ್ತಿತರರು ಹಾಜರಿದ್ದರು.
