Friday, December 5, 2025
Friday, December 5, 2025

DVS College of Arts and Science ಯುವಜನ ಸಾಹಿತ್ಯ ಕೃತಿಗಳ ಅಧ್ಯಯನ ಮಾಡಿ ಜ್ಞಾನ ವೃದ್ಧಿಸಿಕೊಳ್ಳಬೇಕು- ಎಂ.ಇ.ಶಿವಕುಮಾರ್ ಹೊನ್ನಾಳಿ

Date:

DVS College of Arts and Science ಸಾಹಿತ್ಯ ಕ್ಷೇತ್ರದಲ್ಲಿ ಯುವಜನತೆ ಆಸಕ್ತಿ ಬೆಳೆಸಿಕೊಳ್ಳಬೇಕು. ಸಾಹಿತ್ಯ ಕೃತಿಗಳನ್ನು ಅಧ್ಯಯನ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪ್ರಾಧ್ಯಾಪಕ, ಬರಹಗಾರ ಡಾ. ಎಂ.ಇ.ಶಿವಕುಮಾರ ಹೊನ್ನಾಳಿ ಹೇಳಿದರು.

ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಓರಿಯೆಂಟೇಷನ್ ಮತ್ತು ಸ್ವಾಗತ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳು ಸರಿಯಾದ ಆದರ್ಶ ವ್ಯಕ್ತಿತ್ವಗಳನ್ನು ಆಯ್ಕೆ ಮಾಡಿಕೊಳ್ಳುವುದು ಅತ್ಯಂತ ಅವಶ್ಯಕ. ನಿಮ್ಮ ಇಷ್ಟದ ಕ್ಷೇತ್ರದ ಸಾಧಕರ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿ ನೀವು ಕೂಡ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ಜೀವನವು ಅತ್ಯಂತ ಅಮೂಲ್ಯ ಸಮಯ. ಶಾಲಾ ಕಾಲೇಜಿನ ದಿನಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ನೆರವಾಗುತ್ತದೆ. ಪೋಷಕರು ಹಾಗೂ ಗುರು ಹಿರಿಯರ ಮಾರ್ಗದರ್ಶನದಿಂದ ಉನ್ನತ ಸಾಧನೆ ಮಾಡಬೇಕು ಎಂದು ಶುಭಕೋರಿದರು.

ಭಾರತೀಯ ನಾಗರಿಕ ಸೇವಾ ಪರೀಕ್ಷೆಯಲ್ಲಿ 421ನೆ ರಾಂಕ್ ಪಡೆದ ಬಿ.ಎಂ.ಮೇಘನಾ ಮಾತನಾಡಿ, ನಮ್ಮ ಭಾಷೆ, ಪ್ರಾದೇಶಿಕತೆ, ಸಂಸ್ಕೃತಿಯು ನಮ್ಮನ್ನು ಹೊಸತನಡೆಗೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಕೆಟ್ಟ ಆಕರ್ಷಣೆಗಳಿಂದ ದೂರ ಇರಬೇಕು. ಶ್ರದ್ದೆ, ಸಂಕಲ್ಪ, ಶಿಸ್ತು ಇದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು.

ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಡಿವಿಎಸ್ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ನಡೆಸಿದ್ದು, ರಾಜ್ಯ, ರಾಷ್ಟçಮಟ್ಟದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾದ ಕಾರ್ಯಕ್ರಮಗಳನ್ನು ಸಂಸ್ಥೆ ಆಯೋಜಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

DVS College of Arts and Science ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ, ಉಪಾಧ್ಯಕ್ಷ ಎಸ್.ಪಿ.ದಿನೇಶ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಪ್ರೊ. ಎಸ್.ಡಿ.ಉಮೇಶ್,
ಪ್ರೊ. ಶಂಕರನಾರಾಯಣ ಶಾಸ್ತ್ರಿ, ವತ್ಸಲಾ, ಶಿಕ್ಷಕ ವರ್ಗ, ಸಿಬ್ಬಂದಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...