Kempegowda Jayanti ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಇವರ ಸಂಯುಕ್ತಾಶ್ರಯದಲ್ಲಿ ಆ.16 ರ ಬೆಳಿಗ್ಗೆ 10 ಗಂಟೆಗೆ ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ನಲ್ಲಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ರಸಪ್ರಶ್ನೆ, ಪ್ರಬಂಧ, ಕವನ ವಾಚನ ಮತ್ತು ಚಿತ್ರಕಲಾ ಸ್ಫರ್ಧೆಗಳನ್ನು ಏರ್ಪಡಿಸಲಾಗಿದೆ.
Kempegowda Jayanti ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು, ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್, ಸಾಗರ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಜಿಲ್ಲಾ ಮತ್ತು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರು, ರಾಷ್ಟಿçÃಯ ಶಿಕ್ಷಣ ಕಾರ್ಯದರ್ಶಿ, ತಹಸೀಲ್ದಾರ್, ಶಿವಮೊಗ್ಗ ತಾಲ್ಲೂಕು ಇಓ, ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಧಿಕಾರಿ, ಕಸ್ತೂರಿ ಬಾಲಿಕ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ಪ್ರಾಂಶುಪಾಲರು, ಅಧಿಕಾರಿಗಳು, ತಾಲ್ಲೂಕಿನ ಎಲ್ಲ ಸಂಘ ಸಂಸ್ಥೆಗಳ ಅಧ್ಯಕ್ಷರು ಪಾಲ್ಗೊಳ್ಳುವರು.
Kempegowda Jayanti ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ತಾಲ್ಲೂಕು ಮಟ್ಟದ ವಿವಿಧ ಸ್ಪರ್ಧೆಗಳ ಆಯೋಜನೆ, ಮಾಹಿತಿ
Date:
