Chamber of commerce ಶಿವಮೊಗ್ಗ ಜಿಲ್ಲೆಗೆ ರಸ್ತೆ, ರೈಲ್ವೆ, ವಿಮಾನ ಸಂಪರ್ಕ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಅತಿ ಹೆಚ್ಚು ಅನುದಾನ ತಂದಿರುವ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಜನ್ಮದಿನದ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಿ ಶುಭಕೋರಲಾಯಿತು.
ಸಿಗಂದೂರಿನಲ್ಲಿ ದೇಶದಲ್ಲಿಯೇ ಎರಡನೇ ಅತಿ ಉದ್ದದ ಕೇಬಲ್ ಸೇತುವೆ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಅತಿ ಹೆಚ್ಚು ಯೋಜನೆಗಳನ್ನು ತರುವಲ್ಲಿ ಬಿ.ವೈ.ರಾಘವೇಂದ್ರ ಅವರ ಕೊಡುಗೆ ಅಪಾರ. ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ವಿನೋದ್ ಕುಮಾರ್, ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್, ಸಹನಾ ಸುಭಾಷ್, ಗಣೇಶ ಎಂ.ಅಂಗಡಿ, ಪ್ರದೀಪ್ ವಿ ಎಲಿ, ಎಸ್.ಪಿ.ಶಂಕರ್, ಸುರೇಶ್ ಕುಮಾರ್, ಮಾಜಿ ಅಧ್ಯಕ್ಷರಾದ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಎನ್.ಗೋಪಿನಾಥ್ ಇತರರಿದ್ದರು.
