Friday, December 5, 2025
Friday, December 5, 2025

Bhadra Wildlife Sanctuary ಸಕ್ರೆಬೈಲ್ ಸುತ್ತಮುತ್ತ ಕಾಡಾನೆ ದಾಂಧಲೆ, ರೈತರಿಗೆ ಬೆಳೆ ನಷ್ಟ ಆತಂಕ

Date:

Bhadra Wildlife Sanctuary ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಶಿವಮೊಗ್ಗ ತಾಲೂಕಿನ ಸಕ್ರೆಬೈಲ್​ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ಅಷ್ಟೇ ಅಲ್ಲದೆ ಸಕ್ರೆಬೈಲ್​ ಸುತ್ತಾಮುತ್ತಾ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬೆಳೆದ ತೆಂಗು ಹಾಗೂ ಬಾಳೆಗಿಡಗಳನ್ನು ನಾಶ ಮಾಡಿದೆ. ಆನೆಯ ಓಡಾಟವನ್ನು ವಿಡಿಯೋದಲ್ಲಿ ಸೆರೆ ಹಿಡಿದಿರುವ ಸಾರ್ವಜನಿಕರು ಅದನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ. ಆದರೆ ಅದ್ಯಾವುದಕ್ಕೂ ಕ್ಯಾರೇ ಮಾಡದ ಒಂಟಿ ಸಲಗ ತೋಟದಲ್ಲಿ ಸಿಕ್ಕ ವಸ್ತುಗಳನ್ನು ತಿನ್ನುತ್ತಾ ನದಿಯಲ್ಲಿ ಈಜುತ್ತಾ ಆನೆ ನಡೆದಿದ್ದೇ ದಾರಿ ಎಂಬಂತೆ ಓಡಾಡುತ್ತಿದೆ.
Bhadra Wildlife Sanctuary ಈ ಹಿಂದೆಯೂ ಸಹ ಅನೇಕ ಕಾಡಾನೆಗಳು ಭದ್ರಾ ಅಭಯಾರಣ್ಯದಿಂದ ನದಿ ದಾಟಿ ಈಚೆಗೆ ಬಂದಿದ್ದವು. ಕಳೆದ ತಿಂಗಳು ಸಹ ಸಕಲೇಶ್​ಪುರದಿಂದ ರೇಡಿಯೋ ಕಾಲರ್​ ಆನೆಯೊಂದು ಬಂದಿತ್ತು, ನಂತರ ಸಕ್ರೆಬೈಲ್​ನ ಕುಮ್ಕಿ ಆನೆಗಳ ಸಹಾಯದಿಂದ ಅದನ್ನು ಸೆರೆಹಿಡಿಯಲಾಗಿತ್ತು. ಇದೀಗ ಮತ್ತೊಂದು ಆನೆ ಪ್ರತ್ಯಕ್ಷವಾಗಿದ್ದು, ರೈತರಿಗೆ ಸಂಕಟವಾಗಿ ಪರಿಣಮಿಸಿದೆ. ಆನೆಯನ್ನು ಕೂಡಲೇ ಸೆರೆಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...