Hanagerekatte ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್’ವೊಂದಕ್ಕೆ ಕಾರೊಂದು ವೇಗವಾಗಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್’ನ ಹಿಂಬದಿಯ ಎಲ್ಲ ಟೈರ್’ಗಳು ಕಳಚಿಕೊಂಡು ಅಪಘಾತ ಸಂಭವಿಸಿದೆ.
ಡಿಕ್ಕಿಯಾದ ರಭಸಕ್ಕೆ ಬಸ್ ಹಿಂಬದಿಯ ಎಲ್ಲ ಟೈರ್’ಗಳು ಕಳಚಿಕೊಂಡು ಬಸ್’ನ ಹಿಂಭಾಗ ಸಂಪೂರ್ಣ ನೆಲಕ್ಕೆ ಕುಸಿದಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ.
ಡಿಕ್ಕಿ ಹೊಡೆದ ಪರಿಣಾಮ, ಬಸ್ ಹಿಂಬದಿ ನಾಲ್ಕು ಟೈರ್’ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಖಂಗೊಂಡಿದ್ದರೂ, ಗಂಭೀರ ಗಾಯವಾದ ಬಗ್ಗೆ ವರದಿಯಾಗಿಲ್ಲ.
Hanagerekatte ಘಟನೆ ವೇಳೆ ಬಸ್’ನಲ್ಲಿ ಅನೇಕ ಪ್ರಯಾಣಿಕರಿದ್ದು, ಅವರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ. ಎಲ್ಲ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.
ಕುಂಸಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
Hanagerekatte ಹಣಗೆರೆಕಟ್ಟೆಗೆ ತೆರಳುತ್ತಿದ್ದ ಬಸ್ ಹಿಂದುಗಡೆ ಕಾರು ಢಿಕ್ಕಿ, ಪ್ರಾಣಾಪಾಯದಿಂದ ಎಲ್ಲ ಪಾರು
Date:
