Sunday, August 2, 2026
Sunday, August 2, 2026

Women and Child Development Department 2025-26 ನೇ ಸಾಲಿನಲ್ಲಿ ಮಕ್ಕಳಿಗೆ & ಮಹಿಳೆಯರಿಗೆ ನೀಡುವ ಹೊಯ್ಸಳ & ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನ

Date:

Women and Child Development Department 2025-26ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಒಟ್ಟು 4 ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಗೆ ಪ್ರತಿ ಕ್ಷೇತ್ರಕ್ಕೆ ಇಬ್ಬರು ಮಕ್ಕಳಂತೆ ಆಯ್ಕೆಯಾದ ಒಟ್ಟು 8 ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಅರ್ಜಿ ಸಲ್ಲಿಸುವವರು ಸೂಚಿತ ಕ್ಷೇತ್ರಗಳಲ್ಲಿ ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಅವರು ಸಾಧಿಸಿದ ಪ್ರತಿಭೆಯ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿರಬೇಕು. ಕನಿಷ್ಠ 5 ವರ್ಷ ಕರ್ನಾಟಕ ರಾಜ್ಯದಲ್ಲಿ ನೆಲಸಿರಬೇಕು. ಈ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸುವುದು. ರಾಷ್ಟç, ರಾಜ್ಯ, ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿರುವ, ಪ್ರಶಸ್ತಿ ಪಡೆದಿರುವ ಮಾಹಿತಿಯನ್ನು ಸಲ್ಲಿಸಬೇಕು. ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳು ಪುನಃ ಅರ್ಜಿ ಸಲ್ಲಿಸುವಂತಿಲ್ಲ.

Women and Child Development Department ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ದಿ: 12-09-2025 ರೊಳಿಗೆ ಸಲ್ಲಿಸುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಲ್ಕೋಳ, ಶಿವಮೊಗ್ಗ, ದೂ.ಸಂ.: 08182-295514 ನ್ನು ಸಂಪರ್ಕಿಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...