Monday, February 2, 2026
Monday, February 2, 2026

Backward Classes Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Date:

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಪಡೆಯಲು ಆನ್ಲೈನ್ ಅರ್ಜಿ ಅವಧಿಯನ್ನು ಆ.25 ರವರೆಗೆ ವಿಸ್ತರಿಸಲಾಗಿದೆ.
ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1 , 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಇಲ್ಲಿ ಅರ್ಜಿ ಸಲ್ಲಿಸಬೇಕು.
ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ‌. ಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು 2.50 ಲಕ್ಷ ಹಾಗೂ ಪ್ರವರ್ಗ -2ಎ, 2ಬಿ, 3ಎ, 3ಬಿ ಗೆ ಸೇರಿದ ಪೋಷಕರ ವಾರ್ಷಿಕ ಆದಾಯವು 1 ಲಕ್ಷದೊಳಗಿರಬೇಕು.
ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ಗೆ ಭೇಟಿ‌ ನೀಡಬಹುದು.
Backward Classes Welfare Department ಅರ್ಜಿ ಸಲ್ಲಿಸಲು ತಾಂತ್ರಿಕ ದೋಷಗಳು ಉಂಟಾದಲ್ಲಿ ಇಮೇಲ್ ವಿಳಾಸ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಹಾಯವಾಣಿ ಸಂಖ್ಯೆ 8050770004, 8050770005 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...