Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಆ. 28 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣ, ಗಾಂಧಿ ಪಾರ್ಕ್ ಎದುರು, ಬಿ.ಹೆಚ್.ರಸ್ತೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಇಎಸ್‌ಐ ಆಸ್ಪತ್ರೆ ಹತ್ತಿರ, ನಿಟ್ಟುವಳ್ಳಿ, ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
Nidhi Apke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
