Thursday, March 19, 2026
Thursday, March 19, 2026

Canara Bank Rural Self Employment Training Institute ವಸ್ತ್ರ ಚಿತ್ರ ಕಲೋದ್ಯಮ & ಸೆಲ್ ಫೋನ್ ರಿಪೇರಿ ಬಗ್ಗೆ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

Date:

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರಿನಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
31 ದಿನಗಳ ವಸ್ತ್ರಚಿತ್ರ ಕಲಾ ಉದ್ಯಮಿ
( ಎಂಬ್ರಾಯಿಡರಿ ) ತರಬೇತಿಯು 01/09/2025ರಿಂದ ಪ್ರಾರಂಭಗೊಳ್ಳಲಿದೆ.

30 ದಿನಗಳ ಸೆಲ್ ಫೋನ್ ರಿಪೇರಿ & ಸರ್ವಿಸ್ ತರಬೇತಿಯು 24/09/2025 ರಿಂದ ಆರಂಭವಾಗಲಿದೆ.

Canara Bank Rural Self Employment Training Institute ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. ೯೭೪೩೪೨೯೫೯೫, ೮೭೨೨೩೮೪೫೪೧, ೯೧೬೪೪೧೧೫೮೦, ೮೧೦೫೩೭೮೭೩೫ ೯೪೪೯೩೭೧೫೭೯, ೯೪೮೧೯೫೫೭೨೧, ಇಲ್ಲಿ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...