CM Siddharamaiah ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಈ ಹಿಂದೆ ಶೇ.75 ರಷ್ಟು ಅನುದಾನ ಕೇಂದ್ರ ಭರಿಸಿದರೆ, ಶೇ.25ರಷ್ಟನ್ನು ಮಾತ್ರ ರಾಜ್ಯ ಸರ್ಕಾರ ನೀಡಬೇಕಿತ್ತು. ಆದರೆ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಕೇಂದ್ರದ ಪಾಲು ಶೇ.40 ರಿಂದ 42ರಷ್ಟು ಮಾತ್ರ ಬರುತ್ತಿದೆ. ಉಳಿದ ಹಣವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
CM Siddharamaiah ಹೀಗಾಗಿ ರಾಜ್ಯದ ಜನರಿಗೆ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಬೇಕೆಂಬ ಕಾರಣಕ್ಕಾಗಿ ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ರಾಜ್ಯಕ್ಕೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಪಟ್ಟಂತೆ ಸದ್ಯದಲ್ಲೇ ಶ್ವೇತಪತ್ರ ಹೊರಡಿಸುತ್ತೇವೆ ಎಂದು ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆಯ ಅಧಿವೇಶನದಲ್ಲಿ ಹೇಳಿದ್ದಾರೆ.
