Department of Youth Empowerment and Sports ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 2025-26 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.02 ಮತ್ತು 3 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕ್ರೀಡಾಕೂಟದಲ್ಲಿ ಅಥ್ಲೇಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟ್‌ಬಾಲ್, ಕುಸ್ತಿ, ಷಟಲ್ ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ ಮತ್ತು ಆಯ್ಕೆಯ ಕ್ರೀಡೆಗಳು ಟೆನ್ನಿಸ್, ನೆಟ್‌ಬಾಲ್, ಈಜು ಕ್ರೀಡೆಗಳನ್ನು ಆಯೋಜಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯುಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವೀತಿಯ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮಸ್ಥಾನ ಪಡೆದವರು ಮಾತ್ರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.
Department of Youth Empowerment and Sports ಅರ್ಹತೆ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ವೆಬ್‌ಸೈಟ್ https://dasaracmcup-2025.etrpindia.com/KA-sports/ ಮೂಲಕ ಸೆ.01 ರೊಳಗಾಗಿ ಕಡ್ಡಾಯವಾಗಿ ಹೆಸರನ್ನು ನೋಂದಾಯಿಸಿಕೊಳ್ಳುವುದು. ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣಭತ್ಯೆ ಮತ್ತು ದಿನಭತ್ಯೆ ಪಡೆಯಲು ನೆಹರೂ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ತಾಲೂಕುಗಳಿಂದ ಭಾಗವಹಿಸುವ ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗಕ್ಕೆ ಬಂದುಹೋಗುವ ಸಾಮಾನ್ಯ ಪ್ರಯಾಣಭತ್ಯೆ ನೀಡಲಿದ್ದು ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಟೆನ್ನಿಸ್, ನೆಟ್‌ಬಾಲ್ ಮತ್ತು ಈಜು ಕ್ರೀಡೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯ್ಕೆ ಸ್ಪರ್ಧೆಯಾಗಿ ಸಂಘಟಿಸಲಾಗುವುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಹಿತಿಗಾಗಿ ಇಲಾಖೆಯ ದೂ.ಸಂ.: 08182-223328 ನ್ನು ಸಂಪರ್ಕಿಸುವುದು
Department of Youth Empowerment and Sports ಸೆಪ್ಟೆಂಬರ್ 1 & 2. ರಂದು ನೆಹರೂ ಕ್ರೀಡಾಂಗಣದಲ್ಲಿ 2025-26 ನೇ ಸಾಲಿನ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ
Date:
