Saturday, December 6, 2025
Saturday, December 6, 2025

Department of Fisheries ಪ.ಜಾ/ ಪ.ಪಂಗಡಗಳ ಮೀನು ಮಾರಾಟಗಾರರ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

Date:

Department of Fisheries 2025-26 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ರಾಜ್ಯವಲಯದಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ಆರ್ಥಿಕ ನೆರವು ನೀಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50 ರಷ್ಟು ಅಥವಾ ರೂ.3 ಲಕ್ಷ ಆರ್ಥಿಕ ನೆರವನ್ನು ಇಲಾಖಾ ಷರತ್ತು ಮತ್ತು ನಿಬಂಧನೆಗಳಿಗೊಳಪಟ್ಟು ಅನುಷ್ಟಾನಗೊಳಿಸಲಾಗುತ್ತಿದೆ. ಜಿಲ್ಲೆಗೆ ಪರಿಶಿಷ್ಟ ಜಾತಿ-2 ಮತ್ತು ಪರಿಶಿಷ್ಟ ಪಂಗಡ-1 ಮೀನು ಮಾರಾಟಗಾರರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಅರ್ಹ ಮೀನು ಮಾರಾಟಗಾರರು ಸೆ.20 ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಇಲಾಖೆಯ ಆನ್‌ಲೈನ್ ಪೋರ್ಟಲ್ ಮೂಲಕ ಸಲ್ಲಿಸಬೇಕು.
Department of Fisheries ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕ, ಶಿವಮೊಗ್ಗ- 9986040981, ಮೀನುಗಾರಿಕೆ ಸಹಾಯಕ ನಿರ್ದೇಶಕ, ಭದ್ರಾವತಿ-9743370815, ಮೀನುಗಾರಿಕೆ ಸಹಾಯಕ ನಿರ್ದೇಶಕ, ಶಿಕಾರಿಪುರ-9686939028, ಮೀನುಗಾರಿಕೆ ಸಹಾಯಕ ನಿರ್ದೇಶಕರ, ಸಾಗರ ಮತ್ತು ಹೊಸನಗರ-9538044365, ಮೀನುಗಾರಿಕೆ ಸಹಾಯಕ ನಿರ್ದೇಶಕ, ಸೊರಬ-9535386449, ಮೀನುಗಾರಿಕೆ ಸಹಾಯಕ ನಿರ್ದೇಶಕ ತೀರ್ಥಹಳ್ಳಿ-8655132438 ಗೆ ಸಂಪರ್ಕಿಸಬಹುದೆAದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...