Rotary Club Shimoga ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಒಳ್ಳೆಯ ಜೀವನಶೈಲಿ ರೂಢಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್‌ಮೂರ್ತಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು, ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಾಪೂಜಿ ಮೆಡಿಕಲ್ ಕಾಲೇಜು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಳೆಹೊನ್ನೂರಿನಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.
ರೋಟರಿ ಸಂಸ್ಥೆಯು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದು, ಆರೋಗ್ಯ ಶಿಬಿರ ಸೇರಿದಂತೆ ವೈವಿಧ್ಯ ಸೇವಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ನಮ್ಮ ಸಂಸ್ಥೆಯು ವರ್ಷಪೂರ್ತಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜಿಸಿದೆ ಎಂದು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ಪ್ರತಿಭಾ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಬರುವ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳನ್ನು ತಿಳಿಸಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
Rotary Club Shimoga ರೋಟರಿ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ ಮಾತನಾಡಿ, ರೋಟರಿಯ ಉದಾತ್ತ ಗುಣಗಳನ್ನು ಯುವ ಸಮಾಜ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಬಾಪೂಜಿ ಕಾಲೇಜಿನ ವೈದ್ಯರು ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಪರಿಶೀಲಿಸಿದರು.
ರೋಟರಿ ಸಂಸ್ಥೆಯ ಸ್ವಪ್ನಾ, ಸ್ಮಿತಾ ಹಾಗೂ ಎಫ್‌ಪಿಎಐನ ಸತೀಶ್ ಹಾಗೂ ಕಾಲೇಜಿನ ಎನ್.ಎಸ್.ಎಸ್.
ಘಟಕದ ಪ್ರಮುಖರು ಹಾಗೂ ಸಹ ಶಿಕ್ಷಕರು ಹಾಜರಿದ್ದರು.
