Wednesday, September 16, 2026
Wednesday, September 16, 2026

Backward Classes Welfare Department ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ವಿವಿಧ ಅಭಿವೃದ್ಧಿ‌ ಕಾರ್ಯಕ್ರಮ ಮಾಹಿತಿ

Date:

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
5 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 10 ನೇ ತರಗತಿ ನಂತರದ ಕೋರ್ಸ್/ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ.
Backward Classes Welfare Department ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿ, ಮೂಲಭೂತ ಸೌಕರ್ಯಗಳು, ವಸತಿ ರಹಿತರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಮೂಲಕ ಮನೆಗಳ ನಿರ್ಮಾಣ ಮಾಡಲು ರೂ.1.20 ಲಕ್ಷಗಳ ಸಹಾಯಧನ, 1 ರಿಂದ 10 ನೇ ತರಗತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 2000 ಹಾಗೂ ಮೆಟ್ರಿಕ್ ನಂತರದ ಐಟಿಐ, ಪಿಯುಸಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.3000, ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ರೂ.4000 ಹಾಗೂ ತಾಂತ್ರಿಕ ವೃತ್ತಿಪರ ಕೊರ್ಸ್ಗಳಿಗೆ ರೂ. 5000 ವಿಶೇಷ ಸಹಾಯ ಧನ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-222129 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...