Thursday, June 18, 2026
Thursday, June 18, 2026

D.K. Sivakumar ವಿವಾದ ಮಾಡೋದು ಬಿಜೆಪಿ ತತ್ವ, ಧರ್ಮದಲ್ಲಿ ರಾಜಕಾರಣ ಬೇಡ- ಡಿ.ಕೆ.ಶಿವಕುಮಾರ್

Date:

ನಮ್ಮ ನಾಡ ಹಬ್ಬ – ದಸರಾ, ನಮ್ಮ ನಾಡ ದೇವತೆ – ಚಾಮುಂಡೇಶ್ವರಿ, ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ! ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವಳು ನಮ್ಮ ದುರ್ಗಾ ದೇವಿ.

D.K. Sivakumar ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು ಎಂದು ತಿಳಿಸಿದ್ದಾರೆ.

ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ! ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...