Department of Collegiate Education ಪದವಿಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2025- 26 ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಿವಮೊಗ್ಗ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ಆದಿಚುಂಚನರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಾಲೂಕು ಮಟ್ಟದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಆಟದ ಪ್ರದರ್ಶನ ನೀಡಿದರು.
ಬಾಲಕಿಯರು ವಾಲಿಬಾಲ್ ನಲ್ಲಿ ದಾಳಿ, ಅಷ್ಟೇ ರಕ್ಷಣಾತ್ಮಕ ಮತ್ತು ಅತ್ಯಾಕರ್ಷಕ ಆಟದ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು, ಪ್ರಶಸ್ತಿ ಪತ್ರ ಮತ್ತು ಟ್ರೋಪಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ, ಈ ಪ್ರತಿಭೆಗಳು ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ.
ಬಾಲಕರ ವಿಭಾಗದಲ್ಲಿ ಥ್ರೋ ಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರೆ, ವಾಲಿಬಾಲ್, ಖೋ- ಖೋ ದಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿ, ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
Department of Collegiate Education ಈ ಕ್ರೀಡಾ ಪ್ರತಿಭೆಗಳ ಮುಂದಿನ ಕ್ರೀಡಾ ಜೀವನ ಯಶಸ್ವಿಯಾಗಲಿ ಮತ್ತು ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ ಶ್ರೀ ನಾದಮಯಾನಂದನಾಥ ಸ್ವಾಮೀಜಿ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ಗುರುರಾಜ್ ಎಸ್. ವಿ.ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
