Sunday, February 1, 2026
Sunday, February 1, 2026

S. N. Channabasappa ಮೇಜರ್ ಧ್ಯಾನ್ ಚಂದ್ ಅವರ ಜೀವನವೇ ಕ್ರೀಡಾಳುಗಳಿಗೆ ಮಾದರಿ- ಎಸ್.ಎನ್.ಚನ್ನಬಸಪ್ಪ.

Date:

S. N. Channabasappa ಇಂದು ಮೇಜರ್ ಧ್ಯಾನ್‌ಚಂದ್ ರವರ ಜಯಂತಿಯ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ ಮತ್ತು ‘ಸಂಸದ್ ಕ್ರೀಡಾ ಮಹೋತ್ಸವ’ವನ್ನು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಉದ್ಘಾಟಿಸಿದರು.

ಭಾರತ ಹೋಕಿಯ ಜಾದುಗಾರರಾದ ಮೇಜರ್ ಧ್ಯಾನ್‌ಚಂದ್ ಅವರ ತ್ಯಾಗ, ಶ್ರಮ ಮತ್ತು ದೇಶಕ್ಕಾಗಿ ನೀಡಿದ ಅಪಾರ ಕೊಡುಗೆಯನ್ನು ಸ್ಮಸ್ಮರಿಸಿ, ಅವರ ಜೀವನವೇ ಕ್ರೀಡೆಯ ಮಾದರಿ, ಶಿಸ್ತಿನ ಪಾಠ ಮತ್ತು ರಾಷ್ಟ್ರಭಕ್ತಿಯ ಸಂಕೇತವಾಗಿದೆ ಎಂದು ತಿಳಿಸಲಾಯಿತು.

S. N. Channabasappa ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ‘ಖೇಲೋ ಇಂಡಿಯಾ’ ಮತ್ತು ‘ಫಿಟ್ ಇಂಡಿಯಾ’ ಕಾರ್ಯಕ್ರಮದ ಸ್ಫೂರ್ತಿಯಿಂದ, ಯುವಕರಲ್ಲಿ ಆರೋಗ್ಯ, ಶಾರೀರಿಕ ಸಾಮರ್ಥ್ಯ ಹಾಗೂ ಕ್ರೀಡಾ ಚೇತನೆಯನ್ನು ಬೆಳೆಸುವ ಉದ್ದೇಶದಿಂದ ಈ ಕ್ರೀಡಾ ಮಹೋತ್ಸವ ಆಯೋಜನೆಗೊಂಡಿದ್ದು, ಇದು ನಮ್ಮ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯವನ್ನು ಮೆರೆದಿಡಲು ಒಳ್ಳೆಯ ವೇದಿಕೆ ಒದಗಿಸುತ್ತದೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ, ಶ್ರೀ ಡಿ ಎಸ್ ಅರುಣ್ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀಮತಿ ಸುರೇಖಾ ಮುರಳಿಧರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...